ಗಂಗೋತ್ರಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಕ.ಪ್ರ.ವಾರ್ತೆ ಮೈಸೂರು ನ. 4
ಬೋಗಾದಿ ಮುಖ್ಯರಸ್ತೆಯಲ್ಲಿರುವ ಗಂಗೋತ್ರಿ ನರ್ಸರಿ, ಕಿರಿಯ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಸರಸ್ವತಿಪುರಂನ ಠಾಣೆಯ ಎಎಸ್ಐ ನಾಗರಾಜ ನಾಯಕ್ ಮಾತನಾಡಿ, ನಮ್ಮ ಕನ್ನಡ ಭಾಷೆಯು ಸಿಗರು ತೆಗೆದ ಕಬ್ಬಿನಂತೆ, ಉಷ್ಣ ಅಳಿದ ಹಾಲಿನಂತೆ, ಸುಲಿದ ಬಾಳೆ ಹಣ್ಣಿನಂತೆ ರುಚಿಕರವೂ ಸುಂದರವೂ ಆಗಿದೆ. ನಾವು ಕನ್ನಡ ಅಭಿಮಾನ ಬೆಳೆಸಿಕೊಳ್ಳಬೇಕು ಎಂದರು. ಅಧ್ಯಕ್ಷ ವಹಿಸಿದ್ದ ಶಾಲೆಯ ಅಧ್ಯಕ್ಷ ಟಿ. ರಂಗಪ್ಪ ಮಾತನಾಡಿ, ಕನ್ನಡ ನಮ್ಮ ನಾಡ ಭಾಷೆ. ಅದನ್ನು ಉಳಿಸಿ- ಬೆಳಸುವ ಜವಾಬ್ದಾರಿ ನಮ್ಮ ಮೇಲಿದೆ. ಇಂಗ್ಲಿಷ್ನ್ನು ಭಾಷೆಯಾಗಿ ಕಲಿಯಬೇಕು. ಕನ್ನಡವನ್ನು ವ್ಯವಹಾರಿಕವಾಗಿ ಬಳಸಬೇಕು ಎಂದು ತಿಳಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಕಾಂತಿ ನಾಯಕ್, ಸಹ ಮುಖ್ಯೋಪಾಧ್ಯಾಯನಿ ಝರೀನಾ ಬಾಬುಲ್ ಇದ್ದರು. ನಂತರ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.