ರಾಜ್ಯಕ್ಕೆ ಕೇಂದ್ರದಿಂದ ಸಾವಿರ ಕೋಟಿ ಅನುದಾನ
ಟಿ. ನರಸೀಪುರ: ರಾಜ್ಯದ ಹೆದ್ದಾರಿ ರಸ್ತೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಕೇಂದ್ರ ರಸ್ತೆ ನಿಧಿಯಿಂದ ಒಂದು ಸಾವಿರ ಕೋಟಿ ರು. ಅನುದಾನ ಬಿಡುಗಡೆಯಾಗಿದೆ.
ತಾವು ಸೇರಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕೇಂದ್ರ ಸಚಿವರ ಆಸ್ಕರ್ ಫರ್ನಾಂಡೀಸ್ ಅವರನ್ನು ಭೇಟಿ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದ ಹೆದ್ದಾರಿಗಳ ಅಭಿವೃದ್ಧಿಗೆ ಸಾವಿರ ಕೋಟಿ ರು. ಮಂಜೂರಾಗಿದೆ. ಕಪಿಲಾ ನದಿಯ ನೂತನ ಸೇತುವೆಗೆ ಮುಖ್ಯವಾಗಿ ಮೈಸೂರು ಮುಖ್ಯ ರಸ್ತೆ ಅಭಿವೃದ್ಧಿಯಾಗಬೇಕು. ಈ ಸಂಬಂಧ ನ.5ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ನವೆಂಬರ್ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.