ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

6 ವರ್ಷದ ಮಗಳ ಮೇಲೆ ಅಪ್ಪನಿಂದಲೇ ಅತ್ಯಾಚಾರ

Rashmi Kasaragodu
Updated On : 2 Oct 2013, 1:43 am

ಮೈಸೂರು: ಆರು ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ ಅಪ್ಪನನ್ನು ಮೈಸೂರಿನ ಮಂಡಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬನ್ನಿಮಂಟಪದ ವಂದೇ ಮಾತರಂ ಸ್ಲಂ ನಿವಾಸಿ ಕೃಷ್ಣಪ್ಪ(45) ಬಂಧಿತ ಆರೋಪಿ. ಈತನು ಕೂಲಿ ಕೆಲಸ ಮಾಡಿಕೊಂಡಿದ್ದಾನೆ. ವಾರದ ಹಿಂದೆ ತನ್ನ ಮೊದಲ ಪತ್ನಿಯ 6 ವರ್ಷದ ಪುತ್ರಿಯ ಮೇಲೆ ಕೃಷ್ಣಪ್ಪ ಅತ್ಯಾಚಾರ ಎಸಗಿದ್ದಾನೆ. ಈ ವಿಚಾರವನ್ನು ಹೊರಗೆ ಹೇಳಿದರೆ ಕೊಲೆ ಮಾಡುವುದಾಗಿ ಕುಟುಂಬದವರನ್ನು ಬೆದರಿಸಿದ್ದ. ಸ್ಥಳೀಯರಿಗೆ ಈ ವಿಚಾರ ಗೊತ್ತಾಗಿ ಕೃಷ್ಣಪ್ಪನಿಗೆ ಧರ್ಮದೇಟು ಕೊಟ್ಟರು. ಈ ಸಂಬಂಧ ಮಂಡಿ ಠಾಣೆ ಇನ್ಸ್ಪೆಕ್ಟರ್ ಟಿ.ಬಿ. ರಾಜಣ್ಣ, ಎಸ್ಐ ಶಬ್ಬೀರ್ ಹುಸೇನ್ ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಕೃಷ್ಣಪ್ಪನನ್ನು ಬಂಧಿಸಿದ್ದಾರೆ. ಬಾಲಕಿ ಮತ್ತು ಆರೋಪಿಯನ್ನು ವೈದ್ಯಕೀಯ ಚಿಕಿತ್ಸೆಗೊಳಪಡಿಸಿ, ತನಿಖೆ ಮುಂದುವರೆಸಿದ್ದಾರೆ.


ರೋಗಿಗಳಿಗೆ ಜೀವದಾನ...
ಮೈಸೂರು: ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಜನರಲ್ಲಿ ಅರಿವು ಮೂಡಿಸಲು ವೈದ್ಯಕೀಯ ಕಾರ್ಯಕರ್ತರು ಮಂಗಳವಾರ ಜಾಥಾ ನಡೆಸಿ ಸಾರ್ವಜನಿಕರ ಗಮನ ಸೆಳೆದರು.  ಜೆಎಸ್ಎಸ್ ನರ್ಸಿಂಗ್ ಕಾಲೇಜು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಈ ಜಾಥಾವನ್ನು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಬಿ.ಜಿ. ಸಾಗರ್ ಉದ್ಘಾಟಿಸಿದರು.   ಡಿಎಚ್ಒ ಡಾ. ಎಸ್.ಎಂ. ಮಾಲೇಗೌಡ, ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ. ಸಿ. ಶರತ್ಕುಮಾರ್, ಜೆಎಸ್ಎಸ್ ಕಾಲೇಜಿನ ಎನ್ಎಸ್ಎಸ್ ಅಧಿಕಾರಿಗಳಾದ ಚಂದ್ರಶೇಖರ್ ಹಾಗೂ ಮರಳಿಮೋಹನ್ ಇದ್ದರು.  ಜಾಥಾದಲ್ಲಿ ಜೆಎಸ್ಎಸ್ ಕಾಲೇಜಿನ 500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement