ಮೂಗೂರು: ಬಹುಮಾನ ವಿತರಣೆ
ಮೂಗೂರು: ಗೌರಿ- ಗಣೇಶ ಹಬ್ಬ ಹಾಗೂ ಶ್ರೀ ಕನ್ನಡ ಸ್ನೇಹ ಬಳಗದ 28ನೇ ವಾರ್ಷಿಕೋತ್ಸವದ ಅಂಗವಾಗಿ ತ್ರಿಪುರ ಸುಂದರಮ್ಮನವರ ದೇವಸ್ಥಾನದ ಮುಂಭಾಗದಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಸಾರ್ವಜನಿಕರ ಸಮುಖದಲ್ಲಿ ಲಾಟರಿ ಡ್ರಾ ಮಾಡಲಾಯಿತು. ವಿಜೇತರಿಗೆ ಸ್ಥಳದಲ್ಲೇ ಬಹುಮಾನ ನೀಡಲಾಯಿತು. ಮರಿಸ್ವಾಮಿ, ಕುಮಾರಸ್ವಾಮಿ, ನಾಗೇಂದ್ರ ಇದ್ದರು.
ಸಿದ್ದಲಿಂಗಸ್ವಾಮಿಗೆ ಉತ್ತಮ ಶಿಕ್ಷಕ ಪ್ರಶಸ್ತಿ
ಸುತ್ತೂರು: ಜೆಎಸ್ಎಸ್ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಡಿ.ಎಂ. ಸಿದ್ದಲಿಂಗಸ್ವಾಮಿ ಅವರಿಗೆ ಈ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ನಂಜನಗೂಡಿನ ಶ್ರೀಕಂಠೇಶ್ವರ ಕಲಾಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಸಂಸದ ಆರ್. ಧ್ರುವನಾರಾಯಣ್ ಅವರು ಉತ್ತಮ ಶಿಕ್ಷಕ ಪ್ರಶಸ್ತಿ ವಿತರಿಸಿದರು. 1990 ರಿಂದ ಜೆಎಸ್ಎಸ್ ಸಂಸ್ಥೆಯ ವಿವಿಧ ಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಡಿ.ಎಂ. ಸಿದ್ದಲಿಂಗಸ್ವಾಮಿ ಸುತ್ತೂರು ಜೆಎಸ್ಎಸ್ ಪ್ರೌಢಶಾಲೆಯಲ್ಲಿ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಶಾಲೆಯ ಮುಖ್ಯೋಪಾಧ್ಯಾಯ ಶಿವಮಲ್ಲು, ಶಿಕ್ಷಕ ವೃಂದ ಅಭಿನಂದಿಸಿದೆ.