ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

Rashmi Kasaragodu
Updated On : 3 Oct 2013, 12:48 pm

ಚಾಮರಾಜನಗರ: ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ರಸಾದ್ ಅವರು ಅ.3ರಿಂದ 7ರವರೆಗೆ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. 3ರಂದು ಬೆಳಗ್ಗೆ 10 ಗಂಟೆಗೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ಅಯೋಜಿಸಲಾಗಿರುವ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಅ.4ರಂದು ಗುಂಡ್ಲುಪೇಟೆ ತಾಲೂಕಿನ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ನಂತರ ಸಾರ್ವಜನಿಕರ ಕುಂದುಕೊರತೆಗಳ ವಿಚಾರಣೆ ನಡೆಸುವರು. 5ರಂದು ಸಂಜೆ 6 ಗಂಟೆಗೆ ಚಾಮರಾಜನಗರ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. 6ರಂದು ಬೆಳಗ್ಗೆ 11 ಗಂಟೆಗೆ ಕೊಳ್ಳೇಗಾಲ ತಾಲೂಕಿನಲ್ಲಿ ಆಯೋಜಿಸಲಾಗಿರುವ ಗ್ರಾಮಾಂತರ ದಸರಾ ಉತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅ.7ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿರುವ ಮುಖ್ಯಮಂತ್ರಿಯವರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 5 ಗಂಟೆಗೆ ಮೈಸೂರಿಗೆ ತೆರಳಲಿದ್ದಾರೆ ಎಂದು ಸಚಿವರ ಅಪ್ತ ಕಾರ್ಯದರ್ಶಿ ಕೆ.ಸಿ. ವಿರೂಪಾಕ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿಎಂ ಆಗಮನ: ಪೂರ್ವಾಭಾವಿ ಸಭೆ
ಚಾಮರಾಜನಗರ: ಮುಖ್ಯಮಂತ್ರಿಗಳು ಜಿಲ್ಲೆಗೆ ಅ.7ರಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಅ.3ರಂದು ಬೆಳಗ್ಗೆ 11 ಗಂಟೆಗೆ ಜಿಪಂ ಕೆಡಿಪಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕುಂಜಪ್ಪ ತಿಳಿಸಿದ್ದಾರೆ.
8ರಂದು ಜಿಪಂ ಅಧ್ಯಕ್ಷರ ಚುನಾವಣೆ
ಚಾಮರಾಜನಗರ: ಜಿಪಂ 2ನೇ ಅವಧಿಯ ಉಳಿದ ಅವಧಿಗೆ ಅಧ್ಯಕ್ಷರ ಸ್ಥಾನಕ್ಕೆ ಆಯ್ಕೆ ಮಾಡಲು ಅ. 8ರಂದು ಚುನಾವಣೆ ನಿಗದಿಯಾಗಿದೆ. ಜಿಪಂ ಅಧ್ಯಕ್ಷರ ರಾಜಿನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಅ.8ರಂದು ಮಧ್ಯಾಹ್ನ 3 ಗಂಟೆಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಜಿಪಂ ಕಚೇರಿ ಸಭಾಂಗಣದಲ್ಲಿ ಚುನಾವಣೆ ಸಭೆ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ನೋಟರಿಯಾಗಿ ಸತ್ಯನಾರಾಯಣ
ಗುಂಡ್ಲುಪೇಟೆ: ಪಟ್ಟಣದ ಹಿರಿಯ ವಕೀಲ ಸತ್ಯನಾರಾಯಣ ಅವರನ್ನು ಸರ್ಕಾರ 2013ರಿಂದ 2018ರವರೆಗೆನೋಟರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಕ್ಷೇತ್ರದ ಕೆರೆಕಟ್ಟೆಗಳ ದುರಸ್ತಿ: ಜಯಣ್ಣ
ಯಳಂದೂರು: ಕೆರೆಕಟ್ಟೆಗಳಿಗೆ ಸಕಾಲಕ್ಕೆ ನೀರು ತುಂಬಿಸುವ ಯೋಜನೆಯ ಕಾಮಗಾರಿಯನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕೆಂದು ಶಾಸಕ ಎಸ್.ಜಯಣ್ಣ ತಿಳಿಸಿದರು. ತಾಲೂಕಿನ ಗುಂಬಳ್ಳಿಯಲ್ಲಿ ಗಾಂಧಿ ಜಯಂತಿ ಅಂಗವಾಗಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆಗಳ ಪುನಶ್ಚೇತನ ಕಾಮಗಾರಿಯಡಿ ತಿಪ್ಪಯ್ಯನಕಟ್ಟೆ ಅಭಿವೃದ್ಧಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಬರುವ ಕೆರೆಕಟ್ಟೆಗಳನ್ನು ದುರಸ್ತಿಗೊಳಿಸಿ, ಕೋಡಿಗಳಲ್ಲಿ ನೀರು ಪೋಲಾಗದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ಮೀನು ಹಿಡಿಯಲು ಕೆರೆ ನೀರನ್ನು ಖಾಲಿ ಮಾಡಬಾರದು. ಕೆರೆಯಲ್ಲಿ ನೀರು ತುಂಬಿಸಿ ದೋಣಿಗಳ ಹಾಗೂ ತೆಪ್ಪಗಳ ಮುಖಾಂತರ ಮೀನು ಹಿಡಿಯಬೇಕು. ಇದಕ್ಕೆ ಗ್ರಾಮಸ್ಥರು ಸಹಕರಿಸಬೇಕು ಎಂದರು. ಜಿಪಂ ಸದಸ್ಯರಾದ ಸಿದ್ದರಾಜು, ಕೇತಮ್ಮ, ತಾಪಂ ಅಧ್ಯಕ್ಷೆ ಗಂಗಾಮಣಿ, ಉಪಾಧ್ಯಕ್ಷ ಮಹೇಶ್ಕುಮಾರ್,  ಗ್ರಾಪಂ ಅಧ್ಯಕ್ಷೆ ಸುರೇಖಾ, ತಾಪಂ ಸದಸ್ಯ ಕೆ.ಪಿ.ಶಿವಣ್ಣ, ವಿಜಯಲಕ್ಷ್ಮಿ ವೆಂಕಟಾಚಲ, ನಾಗೇಶ್, ನೋಡಲ್ ಅಧಿಕಾರಿ ಸಿದ್ದಲಿಂಗಸ್ವಾಮಿ, ತಾಪಂ ಇಒ ದೇವರಾಜು, ಗ್ರಾಪಂ ಕಾರ್ಯದರ್ಶಿ ಪುಟ್ಟಬುದ್ದಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement