ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಎಸ್ಬಿಎಂನಿಂದ ಶತಮಾನ ನಡಿಗೆ

Rashmi Kasaragodu
Updated On : 3 Oct 2013, 12:30 pm

ಕ.ಪ್ರ.ವಾರ್ತೆ    ಮೈಸೂರು    ಅ. 2
ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶತಮಾನದ ನಡಿಗೆ ಆಯೋಜಿಸಲಾಗಿತ್ತು. ಹೆಚ್ಚುವರಿ ಜಿಲ್ಲಾಧಿಕಾರಿ ನಾಗನಾಯಕ್ ಈ ನಡಿಗೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಆರೋಗ್ಯವಾಗಿರಲು ನಡಿಗೆ ಅಗತ್ಯ. ಇಂದಿನ ಜಂಜಾಟದ ಬದುಕು ಮತ್ತು ಕೆಲಸ ಒತ್ತಡ ನಿವಾರಣೆಗೆ ವ್ಯಾಯಾಮ, ನಡಿಗೆ ಬಹಳ ಅನಿವಾರ್ಯ. ವಯಸ್ಸಾದರೂ ಆರೋಗ್ಯ ಸದೃಢವಾಗಿರುವುದಕ್ಕೆ ಸಿದ್ಧಗಂಗಾ ಶ್ರೀಗಳು ಬಹಳ ದೊಡ್ಡ ಉದಾಹರಣೆ ಎಂದರು.
ಗ್ರಾಹಕರೊಂದಿಗೆ ತಾವು ಸಂಯಮದಿಂದ ವರ್ತಿಸಲು ಆರೋಗ್ಯ ಚೆನ್ನಾಗಿರಬೇಕು. ಆದ್ದರಿಂದ ತಮ್ಮ ಈ ನಡಿಗೆ ಇಂದಿಗೆ ಮಾತ್ರ ಸೀಮಿತವಾಗದೆ ದಿನವೂ ನಡೆಯಬೇಕು ಎಂದು ಹೇಳಿದರು.
ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ ಬಂಗಾರರಾಜು ಮಾತನಾಡಿ, ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಎಸ್ಬಿಎಂ ಇದುವರೆಗೂ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಉತ್ತಮ ಕಾರ್ಯ ನಿರ್ವಹಿಸಿದೆ ಎಂದು ತಿಳಿಸಿದರು. ಶತಮಾನ ನಡಿಗೆಯಲ್ಲಿ ಭಾಗವಹಿಸಿದ್ದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ನೌಕರರು ಹಳೆ ಪ್ರತಿಮೆ ವೃತ್ತ, ಕೆ.ಆರ್. ವೃತ್ತ, ದೇವರಾಜ ಅರಸು ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತಲುಪಿದರು.
ಉಪ ಪ್ರಧಾನ ವ್ಯವಸ್ಥಾಪಕ ಬಾಲಕಿಶನ್, ಮೈಸೂರು ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಆರ್. ರಾಘವೇಂದ್ರ, ಮೈಸೂರು ಬ್ಯಾಂಕ್ ಅಧಿಕಾರಿಗಳ ಸಂಘದ ಕಾರ್ಯದರ್ಶಿ ಶ್ರೀರಾಮ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement