ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಗಾಂಧೀಜಿ, ಶಾಸ್ತ್ರಿ ಜನ್ಮದಿನಾಚರಣೆ

Rashmi Kasaragodu
Updated On : 3 Oct 2013, 12:39 pm

ಕ.ಪ್ರ.ವಾರ್ತೆ    ಪಿರಿಯಾಪಟ್ಟಣ    ಅ. 2
ಗಾಂಧೀಜಿ ಅವರ ತತ್ವ ಮತ್ತು ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡಾಗ ಮಾತ್ರ ಗಾಂಧಿ ಜಯಂತಿಯ ಆಚರಣೆಗೆ ವಿಶೇಷ ಅರ್ಥ ಬರುತ್ತದೆ ಎಂದು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಡಿ. ನಾಗರಾಜೇಗೌಡ ಹೇಳಿದರು.
ತಾಲೂಕು ಆಡಳಿತ ಭವನದಲ್ಲಿ ಏರ್ಪಡಿಸಿದ್ದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ಶಾಸ್ತ್ರಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ದೇಶಕ್ಕಾಗಿ ಅಹಿಂಸಾ ತತ್ವ ಪರಿಪಾಲಿಸುವ ಮೂಲಕ ಸ್ವಾತಂತ್ರ ತಂದುಕೊಟ್ಟ ಮಹಾತ್ಮ ಗಾಂಧೀಜಿ ವಿಶ್ವದ ಶಾಂತಿದೂತರು. ಅವರ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರಂತಹ ಮಹನೀಯರ ಆದರ್ಶ ತತ್ವಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಯುವಜನತೆ ಜೀವನದಲ್ಲಿ ಸಾರ್ಥಕ ಕಂಡುಕೊಳ್ಳಬೇಕು ಎಂದು ತಿಳಿಸಿದರು.
ತಹಸೀಲ್ದಾರ್ ಎಂ.ಕೆ. ಸವಿತಾ ಮಾತನಾಡಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರು ನುಡಿದಂತೆ ನಡೆದ ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ತಮ್ಮ ಜೀವನದುದ್ದಕ್ಕೂ ತತ್ವ ಆದರ್ಶಗಳನ್ನು ಪಾಲಿಸಿಕೊಂಡು ಬಂದವರು. ಪ್ರಸ್ತುತ ರಾಜಕಾರಣಿಗಳು ಜೈಲಿಗೆ ಹೋಗಿ ಬಂದರೂ ಅವರಿಗೆ ಸಮಾಜದಲ್ಲಿ ಜೈಕಾರ ಸಿಗುತ್ತಿರುವುದು ವಿಷಾದ ಸಂಗತಿ ಎಂದು ತಿಳಿಸಿದರು.
ಇದೇ ವೇಳೆ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಧ್ಯವರ್ತಿಗಳ ಪಾತ್ರ ಹಾಗೂ ಮಧ್ಯಸ್ಥಿಕೆ ಕೇಂದ್ರದ ಬಗ್ಗೆ ಅರಿವು ಕಾರ್ಯಾಗಾರ ನಡೆಯಿತು. ನ್ಯಾಯಾಧೀಶ ಡಿ.ನಾಗರಾಜೇಗೌಡ, ಎಪಿಪಿ ಬಿ. ಯೋಗೀಶ್ವರ್, ವಕೀಲರಾದ ಪ್ರಭಾಕರ್, ಶಿವಸ್ವಾಮಿ ಮಧ್ಯಸ್ಥಿಕೆ ಕೇಂದ್ರದ ಕಾರ್ಯಕ್ಷಮತೆ ಬಗ್ಗೆ ಮಾಹಿತಿ ನೀಡಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement