ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಪೌರಕಾರ್ಮಿಕರನ್ನು ಕಾಯಂಗೊಳಿಸಲು ಚಿಂತನೆ: ಜಯಣ್ಣ

Rashmi Kasaragodu
Updated On : 3 Oct 2013, 12:47 pm

ಕ.ಪ್ರ.ವಾರ್ತೆ    ಯಳಂದೂರು    ಅ. 2
ದಿನಗೂಲಿ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಶಾಸಕ ಎಸ್.ಜಯಣ್ಣ ಅವರು ಹೇಳಿದರು.
ಪಪಂ ವತಿಯಿಂದ ಸಿಡಿಎಸ್ ಸಮುದಾಯ ಭವನದಲ್ಲಿ ಗಾಂಧಿ ಜಯಂತಿ ಹಾಗೂ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಪೌರಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಊರು ಕೇರಿಗಳನ್ನು ಶುಚಿ ಮಾಡಿ ಎಲ್ಲರ ಆರೋಗ್ಯ ಕಾಪಾಡುವ ಪೌರಕಾರ್ಮಿಕರು ತಮ್ಮ ಆರೋಗ್ಯವನ್ನು ಕೆಡಿಸಿಕೊಳ್ಳುತ್ತಿದ್ದಾರೆ. ಇವರ ಉದ್ಯೋಗ ಭದ್ರಗೊಳಿಸಲು ಸರ್ಕಾರ ಮುಂದಿನ ದಿನಗಳಲ್ಲಿ ಕೆಲಸ ಕಾಯಂಗೊಳಿಸಲು ಚಿಂತನೆ ನಡೆಸಿದೆ. ಈ ಬಗ್ಗೆ ಈಗಾಗಲೇ ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್ ಅಧಿವೇಶನದಲ್ಲಿ ಚರ್ಚೆ ಮಾಡಿದ್ದಾರೆ ಎಂದು ತಿಳಿಸಿದರು.
ಶಿಬಿರವನ್ನು ಉದ್ಘಾಟಿಸಿದ ಸಂಸದ ಧ್ರುವನಾರಾಯಣ ಮಾತನಾಡಿ, ಪೌರಕಾರ್ಮಿಕರನ್ನು ಗೌರವಿಸಿ, ಸಮಾನತೆಯಿಂದ ಕಾಣಬೇಕು. ಪೌರಕಾರ್ಮಿಕರು ತಮ್ಮ ಮಕ್ಕಳನ್ನು ಕುಲಕಸುಬುಗಳಿಗೆ ಸೇರಿಸದೆ ಉತ್ತಮ ಶಿಕ್ಷಣ ಕೊಡಿಸಿ, ಅವರನ್ನು ಸಮಾಜದಲ್ಲಿ ಉನ್ನತ ಅಧಿಕಾರಿಗಳನ್ನಾಗಿಸುವ ಜತೆಯಲ್ಲಿ ರಾಜಕೀಯವಾಗಿಯೂ ಬೆಳೆಸಬೇಕೆಂದು ತಿಳಿಸಿದರು.
ಪೌರಕಾರ್ಮಿಕರ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಲು ಉನ್ನತ ಶಿಕ್ಷಣ ಪಡೆಯುವವರಿಗೆ ಉಚಿತ ವಸತಿ ವ್ಯವಸ್ಥೆ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಸವಲತ್ತು ನೀಡಲಾಗುತ್ತಿದೆ. ಮಕ್ಕಳಿಗೆ ಪ್ರಾರಂಭಿಕ ಹಂತದಲ್ಲಿ ಶಿಕ್ಷಣ ಕೊಡಿಸುವ ಬದಲು ಪುಡಿಕಾಸಿನ ಆಸೆಗೆ ಬಾಲ ಕಾರ್ಮಿಕರಾಗಿಸುವುದನ್ನು ನಿಲ್ಲಿಸಬೇಕೆಂದು ಮನವಿ ಮಾಡಿದರು.
ಯಳಂದೂರು ಸಿವಿಲ್ ನ್ಯಾಯಾಧೀಶ ಎಚ್.ಆರ್.ರವಿಕುಮಾರ್ ಮಾತನಾಡಿ, ಪೌರಕಾರ್ಮಿಕರು ಸಮಾಜವನ್ನು ಶುಚಿಗೊಳಿಸುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವುದರ ಜೊತೆಯಲ್ಲೇ, ಮದ್ಯಪಾನಕ್ಕೆ ಶರಣಾಗುತ್ತಿದ್ದಾರೆ. ತಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನಹರಿಸದೆ ಅವರ ಕುಟುಂಬದವರನ್ನು ಸಾಲದ ಬಾದೆಯಲ್ಲಿ ಸಿಲುಕಿಸಿ, ತಮ್ಮ ಸೇವಾವಧಿ ಪೂರ್ಣಗೊಳಿಸುವ ಮುಂಚಿತವೇ ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದಾರೆ  ಎಂದು ವಿಷಾದ ವ್ಯಕ್ತಪಡಿಸಿದರು.  ತಹಸೀಲ್ದಾರ್ ಜಗದೀಶ್, ಪಪಂ ಮುಖ್ಯಾಧಿಕಾರಿ ವಿಜಯ್, ತಾಪಂ ಅಧ್ಯಕ್ಷೆ ಗಂಗಾಮಣಿ, ತಾಪಂ ಉಪಾಧ್ಯಕ್ಷ ಮಹೇಶ್ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement