ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸಂಘಗಳ ಸೇವೆ ಅರ್ಥಪೂರ್ಣವಾಗಿರಲಿ: ನಂಜುಂಡಯ್ಯ

Rashmi Kasaragodu
Updated On : 3 Oct 2013, 12:48 pm

ಹನೂರು: ಸಂಘಗಳು ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸುವುದರ ಮೂಲಕ ಅರ್ಥಪೂರ್ಣವಾಗಿರಬೇಕು ಎಂದು ತಹಸೀಲ್ದಾರ್ ನಂಜುಂಡಯ್ಯ ತಿಳಿಸಿದರು.
ಪಟ್ಟಣದ ಬೆಟ್ಟಳ್ಳಿ ಮಾರಮ್ಮ ಕಲ್ಯಾಣ ಮಂಟಪದಲ್ಲಿ ಹನೂರು ನೌಕರರ ಸಂಘವನ್ನು ಉದ್ಘಾಟಿಸಿ ಮಾತನಾಡಿ, ಸಂಘ ನಿಸ್ವಾರ್ಥ ಸೇವೆಗೆ ಮುಡಿಪಾಗಿರಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ ಮಾತನಾಡಿ, ಗಾಂಧಿ ಮತ್ತು ಶಾಸ್ತ್ರೀ ಅವರ ಜನ್ಮ ದಿನದಂದೇ ನೌಕರರ ಸಂಘ ಉದ್ಘಾಟನೆಗೊಳ್ಳುತ್ತಿದ್ದು, ಮಹಾನ್ ನಾಯಕರ ಆದರ್ಶಗಳನ್ನು ಅಳವಡಿಸಿಕೊಂಡು ಉತ್ತಮವಾಗಿ ಸಂಘಟನೆ ಮಾಡುವಂತೆ ಸಲಹೆ ನೀಡಿದರು.
ಸಂಘದ ಕಾರ್ಯದರ್ಶಿ ಶ್ರೀನಿವಾಸ್ ನಾಯ್ಡು ಮಾತನಾಡಿ, ಸಂಘವನ್ನು ಸಾಮಾಜಿಕ ಕಳಕಳಿಯಿಂದ ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುವುದಕ್ಕಾಗಿ ಪ್ರಾರಂಭಿಸಿದ್ದು, ಸಾರ್ವಜನಿಕರಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದರ ಬಗ್ಗೆ ಅರಿವು ಮೂಡಿಸುವುದು, ರಕ್ತದಾನ ಶಿಬಿರಗಳನ್ನು ಆಯೋಜಿಸುವುದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವುದು, ಬಡ ಮಕ್ಕಳ ಶಿಕ್ಷಣಕ್ಕಾಗಿ ಪ್ರೋತ್ಸಾಹ ನೀಡುವುದು, ಮಕ್ಕಳ ಪ್ರತಿಭಾನ್ವೇಷಣೆ ಪರೀಕ್ಷೆಗೆ ತರಬೇತಿ ನೀಡುವುದು, ಯುವಜನರಲ್ಲಿ ಕ್ರೀಡಾಭಿಮಾನ ಬೆಳೆಸುವುದು ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ತಿಳಿಸಿಕೊಡುವುದು ಸಂಘದ ಧ್ಯೇಯೋದ್ದೇಶವಾಗಿದೆ ಎಂದು ತಿಳಿಸಿದರು.
ಸಂಘದ ಅಧ್ಯಕ್ಷ ಜಿ.ಶ್ರೀಧರ್, ತಾಲೂಕು ಕಸಾಪ ಅಧ್ಯಕ್ಷ ಚಿಕ್ಕಬಸವಯ್ಯ, ಉಪಾಧ್ಯಕ್ಷರಾದ ಚಂದ್ರಶೇಖರ್, ಆನಂದ್ರಾಜ್, ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಮತ್ತು ನಿರ್ದೇಶಕರಾದ ಸಿದ್ದರಾಜುಗೌಡ, ರವಿ, ವೆಂಕಟರಾಜು, ಸೋಮಣ್ಣ ಮತ್ತು ಶಂಕರೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement