'ಆಸ್ಪತ್ರೆ ನಿರ್ಮಾಣಕ್ಕೆ8.5 ಕೋಟಿ ಮಂಜೂರು'
ಕ.ಪ್ರ.ವಾರ್ತೆ ಕೆ.ಆರ್. ನಗರ ಅ. 3
ಪಟ್ಟಣದಲ್ಲಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಲು 8.5 ಕೋಟಿ ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಇಲ್ಲಿನ ಹಳೆ ಹೆರಿಗೆ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ 67 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಆಯುರ್ವೇದ ಆಸ್ಪತ್ರೆಯ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಅಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈಗ ಹಣ ಬಿಡುಗಡೆಯಾಗಿದೆ ಎಂದರು.
ಆಯುರ್ವೇದ ಆಸ್ಪತ್ರೆಯನ್ನು ಹೊರವಲಯದಲ್ಲಿರುವ ಕಾಳೇನಹಳ್ಳಿ ಗ್ರಾಮದ ಬಳಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿತ್ತು. ಆದರೆ ಜನತೆಯ ಅನುಕೂಲದ ಹಿತದೃಷ್ಟಿಯಿಂದ ಪಟ್ಟಣದಲ್ಲಿಯೇ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಜಿಪಂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ.ದ್ವಾರಕೀಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ. ಮಾಲೇಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ.ಟಿ. ಶಿವಪ್ರಾಸಾದ್, ತಾಪಂ ಮಾಜಿ ಅಧ್ಯಕ್ಷ ಮಹದೇವ, ಸದಸ್ಯ ನಾಗಣ್ಣ, ಪುರಸಭಾ ಸದಸ್ಯರಾದ ಕೆ.ಎಲ್. ಜಗದೀಶ್, ನಂಜುಂಡ, ಉಮೇಶ್, ಜೆಡಿಎಸ್ ವಕ್ತಾರ ಕೆ.ಎಲ್. ರಮೇಶ್, ಮುಖಂಡರಾದ ಮಿರ್ಲೆ ಧನಂಜಯ ಇದ್ದರು.