ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ

Rashmi Kasaragodu
Updated On : 5 Oct 2013, 12:16 pm

ಕ.ಪ್ರ.ವಾರ್ತೆ  ಸುತ್ತೂರು  ಅ. 4
ನಂಜನಗೂಡು ತಾಲೂಕಿನ ಸುತ್ತೂರಿನಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಶ್ರೀ ಮಲೆ ಮಹದೇಶ್ವರ ಯುವಕರ ಸಂಘದ ಸದಸ್ಯರು ಕಾಲ್ನಡಿಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಹೋಗುವ ಕಾರ್ಯಕ್ರಮಕ್ಕೆ ಗ್ರಾಪಂ ಸದಸ್ಯ ರಂಗಪ್ಪಾಜಿ ಚಾಲನೆ ನೀಡಿದರು. ಸಂಘದ ಅಧ್ಯಕ್ಷ ಎಸ್.ಆರ್. ಲಿಂಗರಾಜು ಮಾತನಾಡಿ, ನಮ್ಮ ಗ್ರಾಮದಲ್ಲಿ ಪುರಾತನ ಕಾಲದಿಂದಲೂ ಕಾಲ್ನಡಿಯಿಂದಲೇ ಮಹದೇಶ್ವರನ ಬೆಟ್ಟಕ್ಕೆ ಹೋಗುತ್ತಿದ್ದರು. ಅದೇ ರೀತಿ ಆ ಪದ್ಧತಿಯನ್ನು ನಾವು ನಮ್ಮ ಸಂಘದ ವತಿಯಿಂದ ಹಮ್ಮಿಕೊಂಡು ಹೋಗುತ್ತಿದ್ದೇವೆ. ನಮ್ಮ ಸಂಘದ ವತಿಯಿಂದ ಬೆಟ್ಟದಲ್ಲಿ ಪರಿಸರ ಕಾಪಾಡಲು ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು. ಗ್ರಾಮದ ಮುಖಂಡರಾದ ಮಲ್ಲೇಶ್, ಸಿದ್ದಯ್ಯ, ಚಿಕ್ಕಮಾದಯ್ಯ ಹೆಚ್ಚುವ ಯುವಕರ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement