ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

'ಸಮಾನತೆಯ ಸಮಾಜ ಕಾಣಲಾಗಿಲ್ಲ'

Rashmi Kasaragodu
Updated On : 5 Oct 2013, 12:16 pm

ಕ.ಪ್ರ.ವಾರ್ತೆ  ಕೆ.ಆರ್. ನಗರ  ಅ. 4
ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಪ್ರಾಮಾಣಿಕರು, ಅಪ್ರಮಾಣಿಕರು ಇರುವ ಕಾರಣ ಸಮಾನತೆಯ ಸಮಾಜವನ್ನು ಕಾಣಲು ಸಾಧ್ಯವಾಗಿಲ್ಲ ಎಂದು ಶಾಸಕ ಸಾ.ರಾ. ಮಹೇಶ್ ವಿಷಾದಿಸಿದರು.
ಮಿನಿ ವಿಧಾನಸೌಧ ಆವರಣದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾರ್ವಜನಿಕ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವವರು ಮನಃಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಬಾರದು ಆಗ ಮಾತ್ರ ಭ್ರಷ್ಟಾಚಾರವನ್ನು ತೊಲಗಿಸಲು ಸಾಧ್ಯ ಎಂದು ತಿಳಿಸಿದರು.
ಇತರೆ ಮಹಾತ್ಮರ ಜಯಂತಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ. ಆದರೆ ಜಾತಿ ಇಲ್ಲದ ಗಾಂಧೀಜಿ ಜಯಂತಿಗೆ ಜನರ ಕೊರತೆ ಎದ್ದು ಕಾಣುತ್ತದೆ. ದೇಶಕ್ಕೆ ಸ್ವಾತಂತ್ರ್ಯ ತಂದ ಗಾಂಧೀಜಿ ಜಯಂತಿಗೆ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ತಾವು ಈ ಹಿಂದೆ ಹೇಳಿದಂತೆ ಮುಂದಿನ ಜಯಂತಿಯೊಳಗೆ ಪುತ್ಥಳಿ ಬದಲಾವಣೆ ಮಾಡಿ ಸುಂದರವಾದ ಗಾಂಧೀಜಿಯನ್ನು ಹೋಲುವ ಪ್ರತಿಮೆಯನ್ನು ಪ್ರತಿಷ್ಠಾಪಿಸುವುದರ ಜತೆಗೆ ಪ್ರತಿಮೆ ಸುತ್ತ ಸುಂದರ ಉದ್ಯಾನವನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಅಲ್ಲದೆ ಇತರೆ ಮಾನ್ಯರ ಜಯಂತಿ ರೀತಿಯಲ್ಲಿ ಗಾಂಧೀಜಿಯವರ ಭಾವಚಿತ್ರವನ್ನು ಮೆರವಣಿಗೆ ಮಾಡಿ ಕಾರ್ಯಕ್ರಮ ಮಾಡುವುದಾಗಿ ಹೇಳಿದರು.
ಜಿಪಂ ಮಾಜಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್, ಸ್ವಾತಂತ್ರ್ಯ ಸೇನಾನಿ ವಿ. ಲಕ್ಕಪ್ಪ, ಪುರಸಭಾ ಸದಸ್ಯರಾದ ಎಚ್.ಸಿ. ರಾಜು, ಉಮೇಶ್, ಕೆ.ಎಲ್. ಜಗದೀಶ್, ಜಿಪಂ ಮಾಜಿ ಸದಸ್ಯ ಎಂ.ಟಿ. ಕುಮಾರ್, ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್, ವಕ್ತಾರ ಕೆ.ಎಲ್. ರಮೇಶ್, ಜಿ. ಪ್ರಕಾಶ್, ಮುದ್ದುಕೃಷ್ಣ ಇದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement