ಬಂಧಿತ ಇಬ್ಬರು ಶಂಕಿತರ ತೀವ್ರ ವಿಚಾರಣೆ
ಮೈಸೂರು: ಮೈಸೂರಿನ ರಾಜೀವ್ನಗರ ಬಡಾವಣೆಯ ಮನೆಯೊಂದರಲ್ಲಿ ಬಂಧಿಸಲಾಗಿರುವ ಉತ್ತರ ಪ್ರದೇಶ ಮೂಲದ ಇಬ್ಬರ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಉತ್ತರಪ್ರದೇಶ ದಾಬೋಹಿ ಗ್ರಾಮದ ಅಫ್ಜಲ್ ಮತ್ತು ಭಜನ್ ಬಂಧಿತರು. ಮೂರು ದಿನಗಳ ಹಿಂದೆಯಷ್ಟೇ ಈ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇವರ ಬಳಿ ಪಿಸ್ತೂಲ್ ಹಾಗೂ ಜೀವಂತ ಗುಂಡುಗಳು ಹೊಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನಂತರ ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಉಗ್ರರ ಭಾವಚಿತ್ರ: ಮೈಸೂರು ನಗರ ಪೊಲೀಸರು ನಾಲ್ಕು ಮಂದಿ ಮೋಸ್ಟ್ ವಾಂಟೆಂಡ್ ಉಗ್ರರು ಬೇಕಾಗಿದ್ದಾರೆ ಎಂಬ ಪೋಸ್ಟರ್ಗಳನ್ನು ಬಸ್ ನಿಲ್ದಾಣಗಳಲ್ಲಿ ಅಂಟಿಸಿದ್ದರು. ಈ ಉಗ್ರರನ್ನು ಆಂಧ್ರಪ್ರದೇಶದ ಪುತ್ತೂರಿನಲ್ಲಿ ಆಂಧ್ರ ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.