ಅಕ್ಟೋಬರ್ ತಿಂಗಳ ಪಡಿತರ ಬಿಡುಗಡೆ
ಕ.ಪ್ರ.ವಾರ್ತೆ ಮೈಸೂರು ಅ. 6
ಜಿಲ್ಲೆಯ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಟೋಬರ್ ತಿಂಗಳ ಅಂತ್ಯೋದಯ ಕಾರ್ಡುದಾರರಿಗೆ 29 ಕೆಜಿ ಅಕ್ಕಿ, 6 ಕೆಜಿ ಗೋಧಿ 1 ರು. ದರದಲ್ಲಿ, ಬಿಪಿಎಲ್ ಏಕಸದಸ್ಯ ಪಡಿತರ ಕಾರ್ಡಿಗೆ 9 ಕೆಜಿ ಅಕ್ಕಿ, 1 ಕೆ.ಜಿ ಗೋಧಿಯನ್ನು 1 ರು. ದರದಲ್ಲಿ, ದ್ವಿ ಸದಸ್ಯರಿಗೆ 18 ಕೆ.ಜಿ. ಅಕ್ಕಿ, 2 ಕೆ.ಜಿ. ಗೋಧಿಯನ್ನು 1 ರು. ದರದಲ್ಲಿ ತ್ರಿ ಸದಸ್ಯ ಮತ್ತು ಅದಕ್ಕಿಂತ ಹೆಚ್ಚಿನ ಸದಸ್ಯರಿರುವ ಕುಟುಂಬಕ್ಕೆ 27 ಕೆ.ಜಿ ಅಕ್ಕಿ, 3 ಕೆ.ಜಿ ಗೋಧಿಯನ್ನು 1 ರು. ದರದಲ್ಲಿ ನೀಡಲಾಗುತ್ತದೆ.
ಪ್ರತಿ ಎಎವೈ ಮತ್ತು ಬಿಪಿಎಲ್ ಪಡಿತರ ಚೀಟಿಗೆ 1 ಕೆಜಿಯಂತೆ 13.50 ರು. ದರದಲ್ಲಿ ಸಕ್ಕರೆಯನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್‌ನಲ್ಲಿ ಎಪಿಎಲ್ ಪಡಿತರ ಚೀಟಿದಾರರಿಗೆ ಹಂಚಿಕೆ ಬಿಡುಗಡೆ ಮಾಡಿಲ್ಲ. ಈ ಪಡಿತರವನ್ನು ಅ.19 ರೊಳಗೆ ಪಡೆಯಬೇಕು. ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದಂತೆ ಯಾವುದೆ ದೂರುಗಳಿದ್ದರೂ ಕಾರ್ಡುದಾರರು ಸಂಬಂಧಿಸಿದ ಗ್ರಾಪಂ, ತಾಲೂಕು ಮಟ್ಟದ ಅಧಿಕಾರಿಗಳು ಅಥವಾ ತಹಸೀಲ್ದಾರ್ ಅವರನ್ನು ಸಂಪರ್ಕಿಸಬಹುದು ಅಥವಾ ಇಲಾಖೆಯ ಹಿರಿಯ ಉಪ ನಿರ್ದೇಶಕ ಡಾ.ಕೆ. ರಾಮೇಶ್ವರಪ್ಪ ಅವರ ದೂ.0821- 2422107 ಅಥವಾ ಇಲಾಖೆಯ ಬೆಂಗಳೂರು ಕಚೇರಿ ಸಹಾಯವಾಣಿ ಸಂಖ್ಯೆ 1800- 425- 9339ಗೆ ದೂರು ಸಲ್ಲಿಸಬಹುದು.