ಅಲ್ಪಸಂಖ್ಯಾತರಿಗೆ ಕಂಪ್ಯೂಟರ್ ತರಬೇತಿ
ಕ.ಪ್ರ.ವಾರ್ತೆ ಮೈಸೂರು ಅ. 6
ಪ್ರಸಕ್ತ ಸಾಲಿನಲ್ಲಿ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಹಾಗೂ ಕ್ರಿಶ್ಚಿಯನ್ ಸಮುದಾಯದ ವಿದ್ಯಾವಂತ ಯುವಕ, ಯುವತಿಯರಿಗೆ ಕಂಪ್ಯೂಟರ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ ಅಲ್ಪಸಂಖ್ಯಾತ ಹಾಗೂ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ತರಬೇತಿಯು 4 ರಿಂದ 6 ತಿಂಗಳು ನಡೆಯಲಿದೆ. ಮಾಸಿಕ ಶಿಷ್ಯವೇತನ ನೀಡಲಾಗುತ್ತದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಅಂಕಪಟ್ಟಿ, ಜಾತಿ, ಆದಾಯ ಪ್ರಮಾಣ ಪತ್ರ, ಇತ್ತೀಚಿನ ಭಾವಚಿತ್ರ ಲಗತ್ತಿಸಬೇಕು. ಇಲ್ಲಿ ಡಿಪ್ಲೋಮಾ ಇನ್ ಫೈನಾನ್ಸಿಯಲ್ ಅಕೌಂಟಿಂಗ್ ಮ್ಯಾನೇಜ್‌ಮೆಂಟ್ ವಿತ್ ಆಫೀಸ್ ಅಟೋಮೇಷನ್, ಡಿಪ್ಲೊಮಾ ಇನ್ ಕಂಪ್ಯೂಟರ್ ಟೀಚರ್ಸ್ ತರಬೇತಿ, ಅಡ್ವಾನ್ಸಡ್ ಡಿಪ್ಲೊಮಾ ಇನ್ ಸಾಫ್ಟ್‌ವೇರ್ ಟೆಕ್ನಾಲಜಿ ಮತ್ತು ಡಿಪ್ಲೊಮಾ ಇನ್ ಪಿಸಿ ಹಾರ್ಡ್‌ವೇರ್ ಆ್ಯಂಡ್ ನೆಟ್‌ವರ್ಕಿಂಗ್ ಕುರಿತು ತರಬೇತಿ ನೀಡಲಾಗುತ್ತದೆ.
ನಿಗದಿತ ಅರ್ಜಿಯನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನಂ.1179/17, ಭೀಮ ಜ್ಯುವೆಲರ್ಸ್ ಹಿಂಭಾಗ, ಡಿ.ದೇವರಾಜ ಅರಸು ರಸ್ತೆ, ಮೈಸೂರು. ಇವರಿಗೆ ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲಾತಿಯನ್ನು ಅ.18 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ಸಂಪರ್ಕಿಸಬಹುದು.