ಕರಾಟೆ ಪಂದ್ಯಾವಳಿಗೆ ಚಾಲನೆ
ಕ.ಪ್ರ.ವಾರ್ತೆ ಮೈಸೂರು ಅ. 7
ಮೈಸೂರು ಕರಾಟೆ ಅಸೋಸಿಯೇಷನ್ ಸಂಸ್ಥೆ ಸೋಮವಾರ ಆಯೋಜಿಸಿದ್ದ ಕರಾಟೆ ಪಂದ್ಯಾವಳಿ- 2013ಕ್ಕೆ ಮೇಯರ್ ಎನ್.ಎಂ. ರಾಜೇಶ್ವರಿ ಚಾಲನೆ ನೀಡಿದರು.
ವಿನಾಯಕನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮೇಯರ್, ಕ್ರೀಡೆಯಲ್ಲಿ ಸೋಲು, ಗೆಲುವು ಸಹಜ. ಎರಡನ್ನೂ ಸಮಾನವಾಗಿ ಸ್ವೀಕರಿಸಿ ಎಂದು ಶುಭ ಕೋರಿದರು.
ಪುರುಷ ಮತ್ತು ಮಹಿಳಾ ಕುಮಿತ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಜೊತೆಗೆ ಬಾಲಕ, ಬಾಲಕಿಯರ ಕಲರ್ ಬೆಲ್ಟ್ ಮತ್ತು ಬ್ಲ್ಯಾಕ್ ಬೆಲ್ಟ್ ಸ್ಪರ್ಧೆ ಆಯೋಜಿಸಲಾಗಿದೆ.
ವಿವಿಧ ವಯೋವಾನದವರಿಗೆ ಆಯೋಜಿಸಿರುವ ಈ ಸ್ಪರ್ಧೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸ್ಪರ್ಧಿಗಳು ಆಗಮಿಸಿದ್ದಾರೆ.
ಈ ಎಲ್ಲಾ ವಿಭಾಗಗಳಿಂದ ಒಟ್ಟು 350 ಮಂದಿ ಸ್ಪರ್ಧಿಗಳು ಭಾಗವಹಿಸಿದ್ದಾರೆ.
ದಸರಾ ಕ್ರೀಡಾ ಉಪ ಸಮಿತಿ ಅಧ್ಯಕ್ಷ ಎಂ.ಎಸ್. ಸತ್ಯನಾರಾಯಣ, ಸಾಹಸ ಕ್ರೀಡಾ ಉಪ ಸಮಿತಿ ಅಧ್ಯಕ್ಷ ಬಾಬು ನರೇಂದ್ರ ಪ್ರಸಾದ್, ಸಂಘದ ಅಧ್ಯಕ್ಷ ಎನ್. ಶಂಕರ್, ಕಾರ್ಯದರ್ಶಿ ದೀಪಕ್ ಕುಮಾರ್ ಇದ್ದರು.