ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮೈಸೂರು ಮಿಲ್‌ನಲ್ಲಿ ಕಳವು ಯತ್ನ; ಇನ್ಸ್‌ಪೆಕ್ಟರ್ ಅಬ್ದುಲ್ ಅಮಾನತು

Rashmi Kasaragodu
Updated On : 8 Oct 2013, 1:37 am

ಕೆಜಿಎಫ್: ಬಿಜಿಎಂಎಲ್ ಚಿನ್ನದ ಗಣಿಗೆ ಸೇರಿದ ಮೈಸೂರು ಮಿಲ್‌ನಲ್ಲಿ ಕಳವು ಮಾಡಲು ಯತ್ನಿಸಿದ 19 ಮಂದಿ ಆರೋಪಿಗಳಿಗೆ ಸಹಕರಿಸಿದ್ದ ಚಾಂಪಿಯನ್‌ರೀಫ್ ಪೊಲೀಸ್ ಠಾಣಾ ಸರ್ಕಲ್ ಇನ್ಸಪೆಕ್ಟರ್ ಅಬ್ದುಲ್ ಸಲೀಂ ಅವರನ್ನು ಅಮಾನತುಗೊಳಿಸಲಾಗಿದೆ.  
ಬಿಜಿಎಂಎಲ್ ಭದ್ರತಾ ಸಿಬ್ಬಂದಿಯೊಂದಿಗೆ ಶಾಮೀಲಾಗಿ ಆ.17ರಂದು ಮಧ್ಯರಾತ್ರಿ ಆರೋಪಿಗಳು ಲಕ್ಷಾಂತರ ಬೆಲೆ ಬಾಳುವ ಚಿನ್ನ ಮಿಶ್ರಿತ ಮಣ್ಣನ್ನು ಕಳವು ಮಾಡಲು ಯತ್ನಿಸುತ್ತಿದ್ದರು. ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಕದ್ದ ವಸ್ತು ವಶಪಡಿಸಿಕೊಳ್ಳಲಾಗಿತ್ತು. ತನಿಖೆ ವೇಳೆ ಇನ್ಸ್‌ಪೆಕ್ಟರ್ ಅಬ್ದುಲ್ ಸಲೀಂ ಭಾಗಿಯಾಗಿರುವುದು ಖಚಿತವಾಗಿದ್ದು ಆ.22ರಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಎಸ್‌ಪಿ ಡಾ.ರೋಹಿಣಿ  ಸೆಫಟ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement