ಆರೋಗ್ಯ ತಪಾಸಣೆ
ಹುಣಸೂರು: ರೋಟರಿ ಸಂಸ್ಥೆ ಹಾಗೂ ಬೆಂಗಳೂರಿನ ಮೈಕ್ರೊ ಕಂಪನಿ ಸಹಯೋಗದಲ್ಲಿ ಅ.10ರಂದು ಪಟ್ಟಣದ ರೋಟರಿ ಭವನದಲ್ಲಿ ಮಧುಮೇಹ ಹಾಗೂ ರಕ್ತದೊತ್ತಡದ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ತಜ್ಞ ವೈದ್ಯರು ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆ ನೀಡುವರು. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ರೋಟರಿ ಸಂಸ್ಥೆಯ ಅಧ್ಯಕ್ಷ ರಾಜಶೇಖರ್(78995 68455) ಕೋರಿದ್ದಾರೆ.