'ಸಿಎಂ ವಿರುದ್ಧ ಶಾಸಕರ ಅಸಮಾಧಾನ ಸುಳ್ಳು'
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 20 ಶಾಸಕರು ಅಸಮಾಧಾನಗೊಂಡಿದ್ದಾರೆ ಎಂಬ ಆರೋಪ ಸುಳ್ಳು. ಈ ಬಗ್ಗೆ ವರಿಷ್ಠ ಮಂಡಳಿಗೆ ಯಾವುದೇ ದೂರು ಹೋಗಿಲ್ಲ ಎಂದು ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದರು. ಸಿದ್ದರಾಮಯ್ಯ ಎಲ್ಲ ಜನಾಂಗಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ ಎಂದರು.