ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಎಲ್ಇಡಿ ಬಲ್ಬ್ ಬಳಕೆಗೆ ಶ್ಲಾಘನೆ

Rashmi Kasaragodu
Updated On : 12 Oct 2013, 12:05 pm

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಸೆಸ್ಕ್ ವಿದ್ಯುತ್ ಉಳಿತಾಯದ ನಿಟ್ಟಿನಲ್ಲಿ ದೀಪಾಲಂಕಾರದ ವ್ಯವಸ್ಥೆ ಮಾಡಿರುವುದು ಶ್ಲಾಘನೀಯ ಎಂದು ಕರ್ನಾಟಕ ದಲಿತ ವೇದಿಕೆ ರಾಜ್ಯಾಧ್ಯಕ್ಷ ಎಂ. ನರಸಿಂಹಮೂರ್ತಿ ತಿಳಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದೆ. ಆದರೆ ವಿನೂತನ ರೀತಿಯಲ್ಲಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಮಾಡಿರುವುದು ಶ್ಲಾಘನೀಯ. ವಿದ್ಯುತ್ ಮಿತವ್ಯಯ, ವಿದ್ಯುತ್ ಸದ್ಬಳಕೆ, ವಿದ್ಯುತ್ನ ಮೌಲ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಎಲ್ಇಡಿ ಬಲ್ಪ್ ಬಳಸಿ ಅಲಂಕೃತವಾಗಿ, ಅರ್ಥಪೂರ್ಣವಾಗಿ ದೀಪಾಲಂಕಾರದ ವ್ಯವಸ್ಥೆ ಮಾಡಿರುವುದು ಭವಿಷ್ಯದ ಪೀಳಿಗೆಗೆ ವಿದ್ಯುತ್ ಉಳಿತಾಯದಂತಹ ಕಾರ್ಯ ಮಾಡಿರುವ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement