ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಲೋಕಾ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Srinivasa Murthy VN
Updated On : 18 Oct 2013, 12:32 pm

ಮೈಸೂರು: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಜಿಲ್ಲೆಯಲ್ಲಿ ಅ.21ರಿಂದ 26ರವರೆಗೆ ಬೆಳಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರಿಂದ ದೂರು ಅಹವಾಲು ಸ್ವೀಕರಿಸುವರು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಎಂ. ಜಗದೀಶ್ ಪ್ರಸಾದ್ ತಿಳಿಸಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಕ್ಕಾಗಿ ವಿಳಂಬ, ಲಂಚದ ಬೇಡಿಕೆ ಹಾಗೂ ಇನ್ನಿತರೆ ತೊಂದರೆ ನೀಡುವ ಸರ್ಕಾರಿ ಅಧಿಕಾರಿ ನೌಕರರ ವಿರುದ್ಧ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರು ನೀಡಬಹುದು. ಸಾರ್ವಜನಿಕರು ಈ ಕಾರ್ಯಕ್ರಮದ ಪ್ರಯೋಜನ ಪಡೆಯಬೇಕು ಎಂದು ಅವರು ಕೋರಿದ್ದಾರೆ.ಅ.21ರಂದು ಮೈಸೂರಿನ ಚಾಮುಂಡಿ ಅತಿಥಿ ಗೃಹ, ಅ.22ರಂದು ನಂಜನಗೂಡು ತಾಲೂಕು ಕಚೇರಿ ಆವರಣ, 23ರಂದು ಕೆ.ಆರ್. ನಗರ ಅತಿಥಿ ಗೃಹ, 24ರಂದು ಹುಣಸೂರು ಅತಿಥಿ ಗೃಹ, 25ರಂದು ಪಿರಿಯಾಪಟ್ಟಣ ಅತಿಥಿ ಗೃಹ, 26ರಂದು ಎಚ್.ಡಿ. ಕೋಟೆ ಮತ್ತು ಟಿ. ನರಸೀಪುರ ಅತಿಥಿ ಗೃಹದಲ್ಲಿ ಅಹವಾಲು ಸ್ವೀಕರಿಸಲಾಗುತ್ತದೆ.ಲೋಕಾಯುಕ್ತ ಅಧಿಕಾರಿಗಳ ಆಯಾ ತಾಲೂಕು ಭೇಟಿ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಮುಖ್ಯಸ್ಥರು ಹಾಜರಿದ್ದು, ತಮ್ಮ ತಮ್ಮ ಇಲಾಖೆಗಳಲ್ಲಿ ಬಾಕಿಯಿರುವ ಸಾರ್ವಜನಿಕರ ಅರ್ಜಿಗಳಿಗೆ ಸಂಬಂಧಿಸಿದಂತೆ ವಿವರಣೆ ನೀಡಲು ಹಾಗೂ ಈ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಕ್ತ ಸಹಕಾರ ನೀಡುವಂತೆ ಸೂಚಿಸಲು ಜಿಲ್ಲಾಧಿಕಾರಿ, ಜಿಪಂ ಸಿಇಒ ಇತರ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಕೋರಿದ್ದಾರೆ.

ರಂಗತೋರಣಕ್ಕೆ ಮಂಡ್ಯ ರಮೇಶ್ ಆಯ್ಕೆ
ಮೈಸೂರು: ಬಳ್ಳಾರಿಯ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಅ.25ರಿಂದ 27ರವರೆಗೆ ನಡೆಯುವ ರಂಗತೋರಣ ವಿದ್ಯಾರ್ಥಿ ನಾಟಕೋತ್ಸವದ ಸರ್ವಾಧ್ಯಕ್ಷರಾಗಿ ಚಲನಚಿತ್ರ ನಟ ಮಂಡ್ಯ ರಮೇಶ್ ಆಯ್ಕೆಯಾಗಿದ್ದಾರೆ. ನಟ, ನಿರ್ದೇಶಕ ಹಾಗೂ ರಂಗಭೂಮಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿರುವ ಮಂಡ್ಯ ರಮೇಶ್ ಅವರು ಮೈಸೂರಿನಲ್ಲಿ ನಟನ ಸಂಸ್ಥೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement