ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ವಿದ್ಯಾರ್ಥಿಗಳಲ್ಲಿ ಬೌದ್ಧಿಕ ವಿಕಸನ ಕುಂಠಿತ: ಗೋಕುಲ್

Srinivasa Murthy VN
Updated On : 18 Oct 2013, 12:31 pm

ಕ.ಪ್ರ.ವಾರ್ತೆ ಮೈಸೂರು ಅ. 17
ಇಂದಿನ ವಿದ್ಯಾರ್ಥಿಗಳಲ್ಲಿ ಮಾನಸಿಕ ಹಾಗೂ ಬೌದ್ಧಿಕ ವಿಕಸನ ಕುಂಠಿತವಾಗುತ್ತಿದೆ ಎಂದು ರಾಜೀವ್ಗಾಂಧಿ ರಾಷ್ಟ್ರೀಯ ಉದ್ಯಾನವನದ ನಿರ್ದೇಶಕ ಆರ್. ಗೋಕಲ್ ಆತಂಕ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಮುಕ್ತ ಗಂಗೋತ್ರಿಯ ಕಾವೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕೆ- ಸೆಟ್ ಮತ್ತು ಯುಜಿಸಿ- ನೆಟ್ ಪರೀಕ್ಷಾ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಯುವ ಜನರನ್ನು ಹಿಂಜರಿಕೆ ಹಾಗೂ ಸಂಕುಚಿತ ಮನೋಭಾವ ಕಟ್ಟಿಹಾಕಿದೆ. ಹೀಗಾಗಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ವಿಫುಲವಾಗಿದ್ದರೂ ಬಯಸಿದ ಉದ್ಯೋಗ ಪಡೆಯುವಲ್ಲಿ ಸಾಧ್ಯವಾಗುತ್ತಿಲ್ಲ. ಜೀವನ ಶೈಲಿ ಬದಲಾದರೂ ಸಹ ಮಾಸಿಕ ಹಾಗೂ ಬೌದ್ಧಿಕ ವಿಕಸನ ಕಡಿಮೆಯಾಗಿದೆ ಎಂದರು.
ವಿದ್ಯಾರ್ಥಿಗಳು ಪ್ರತಿಯೊಂದನ್ನು ಗಳಿಸುವ ಹಾಗೂ ಅನುಭವಿಸುವ ಮತ್ತು ಅದಕ್ಕೆ ಪೂರಕವಾಗಿ ಬದುಕುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು. ಇಂತಹ ಮನೋಭಾವವನ್ನು ಹಂತಹಂತವಾಗಿ ರೂಢಿಸಿಕೊಳ್ಳುತ್ತಾ ಹೋದರೆ, ಮುಂದಿನ ದಿನಗಳಲ್ಲಿ ಉತ್ತಮ ಸಾಧನೆ ಹೊಂದಬಹುದು ಎಂದು ಅವರು ತಿಳಿಸಿದರು.
ಇಂದಿನ ಪೈಪೋಟಿ ಯುಗದಲ್ಲಿ ಇತರರ ಸ್ಪರ್ಧೆ ಎದುರಿಸಿ ಗುರಿ ತಲುಪಬೇಕಾದರೆ ಅಗತ್ಯ ಪದವಿಯ ಜತೆಗೆ ಕೌಶಲ ಅವಶ್ಯಕ. ಇಂತಹ ತರಬೇತಿಯ ಸದುಪಯೋಗ ಪಡೆದು ಯುವಜನತೆ ಭವಿಷ್ಯ ರೂಪಿಸಿಕೊಳ್ಳಲು ಮುಂದೆ ಬರಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಕ್ತ ವಿವಿ ಕುಲಪತಿ ಪ್ರೊ. ಎಂ.ಜಿ. ಕೃಷ್ಣನ್, ಎಲ್ಲಾ ವೃತ್ತಿಗಿಂತ ಶಿಕ್ಷಕರ ವೃತ್ತಿ ಶ್ರೇಷ್ಠವಾದುದು. ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರು ಸಮಾಜದ ಏಳಿಗೆಗೆ ನಿಷ್ಠಾವಂತರನ್ನು ರೂಪಿಸುವ ನಿಪುಣರಾಗಿರಬೇಕು. ಈ ಹಿನ್ನೆಲೆಯಲ್ಲಿ ಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಗಮನ ಹರಿಸಬೇಕು ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಆರ್. ಗೋಕುಲ್ ಅವರನ್ನು ಸನ್ಮಾನಿಸಲಾಯಿತು. ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement