ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

'ಒಬ್ಬರ ಮೇಲೆ ಮತ್ತೊಬ್ಬರಿಗೆ ಅಪನಂಬಿಕೆ'

Vishwanath S
Updated On : 19 Oct 2013, 12:12 pm

ಕ.ಪ್ರ.ವಾರ್ತೆ ,  ಪಿರಿಯಾಪಟ್ಟಣ ,  ಅ. 18
ಇಂದಿನ ವ್ಯವಸ್ಥೆಯಲ್ಲಿ ಒಬ್ಬರ ಮೇಲೊಬ್ಬರು ಅಪನಂಬಿಕೆ ಇಟ್ಟುಕೊಂಡು ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೆ.ಆರ್. ನಗರದ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಮಲ್ಲಿಕಾರ್ಜುನಗೌಡ ವಿಷಾದಿಸಿದರು.
ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಸಕ ಕೆ. ವೆಂಕಟೇಶ್ ಮಾತನಾಡಿದರು. ತಹಸೀಲ್ದಾರ್ ಎಂ.ಕೆ. ಸವಿತಾ ಮಾತನಾಡಿದರು. ನಾಯಕ ಸಮುದಾಯದ ಪ್ರತಿಭಾನ್ವಿತ ಮಕ್ಕಳನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಮುದಾಯದ ಮುಖಂಡರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನಾ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರವನ್ನು ಡೊಳ್ಳು ಕುಣಿತ, ಜಾನಪದ ನೃತ್ಯ, ನಗಾರಿ ಸೇರಿದಂತೆ ವಿವಿಧ ವಾದ್ಯಗಳೊಂದಿಗೆ ಪಟ್ಟಣದ ಎಪಿಎಂಸಿ ಮುಂಭಾಗದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ತಾಪಂ ಅಧ್ಯಕ್ಷೆ ಪವಿತ್ರಾ, ಜಿಪಂ ಸದಸ್ಯರಾದ ಮಂಜುಳಾರಾಜ್, ಕಾವೇರಿಶೇಖರ್, ಎಂ.ಪಿ. ಚಂದ್ರೇಶ್, ಎಸ್.ಎ. ಶಿವಣ್ಣ, ತಾಪಂ ಉಪಾಧ್ಯಕ್ಷ ಪ್ರಕಾಶ್, ಸದಸ್ಯರಾದ ಆರ್.ಸಿ. ಚಂದ್ರು, ರತ್ನಮ್ಮ, ಬಿ.ವಿ. ಅನಿತಾ, ಜವರಪ್ಪ, ಪಪಂ ಸದಸ್ಯರಾದ ಸಣ್ಣಪ್ಪ, ಸೌಭಾಗ್ಯ, ಇಒ ಮಹದೇವಸ್ವಾಮಿ, ಬಿಒ ರಾಮಲಿಂಗು, ಸಮಾಜ ಕಲ್ಯಾಣಾಧಿಕಾರಿ ನಾರಾಯಣ್, ಎಇಇ ಮಂಜುನಾಥ್, ಮುಖಂಡರಾದ ಪುಟ್ಟಯ್ಯ, ಕುಮಾರ್, ಹರೀಶ್, ರಾಮಚಂದ್ರು, ನಿಲಂಗಾಲ ಜಯಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement