ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಇಂದು ಅಂಗವಿಕಲರ ವೇದಿಕೆಯಿಂದ ಧರಣಿ

Srinivasa Murthy VN
Updated On : 21 Oct 2013, 1:02 am

ಮೈಸೂರು: ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಜಾರಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗವಿಕಲರ ವೇದಿಕೆಯಿಂದ ಅ.21ರ ಬೆಳಗ್ಗೆ 11.30ಕ್ಕೆ ನಗರದ ಡಿ. ಸುಬ್ಬಯ್ಯ ರಸ್ತೆಯಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಎದುರು ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಸಂಚಾಲಕ ವಾಟಾಳ್ ಬಸವರಾಜ್ ತಿಳಿಸಿದ್ದಾರೆ. ಮೊ. 74111 46205 ಸಂಪರ್ಕಿಸಬಹುದು.

50ಕ್ಕೂ ಹೆಚ್ಚು ಮಂದಿ ರಕ್ತದಾನ
ಮೈಸೂರು: ಸಿಂಡಿಕೇಟ್ ಬ್ಯಾಂಕ್ 88ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಇತ್ತೀಚೆಗೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಬ್ಯಾಂಕಿನ ಪ್ರಾದೇಶಿಕ ಪ್ರಧಾನ ವ್ಯವಸ್ಥಾಪಕ ನಿರ್ದೇಶಕ ಎನ್. ಮಧುರ್ ಭೂತೇಶ್ವರನ್ ಸ್ವಯಂಪ್ರೇರಿತ ರಕ್ತದಾನ ಮಾಡಿ ಶಿಬಿರಕ್ಕೆ ಚಾಲನೆ ನೀಡಿದರು. ನಂತರ ವಿವಿಧ ಶಾಖೆಗಳ ಮುಖ್ಯಸ್ಥರು, ಸಿಬ್ಬಂದಿ ಹಾಗೂ ಗ್ರಾಹಕರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು. ನಂತರ ನಡೆದ ಗ್ರಾಹಕರ ಸಭೆಯಲ್ಲಿ ಮಧುರ್ ಭೂತೇಶ್ವರನ್ ಬ್ಯಾಂಕಿನ ಯೋಜನೆಗಳನ್ನು ತಿಳಿಸಿದರು. ಮಂಡ್ಯದ ಹೇಮನಹಳ್ಳಿ ಹಾಗೂ ಹಾಸನದ ಶಂಕರನಹಳ್ಳಿಯಲ್ಲಿ ಹೊಸ ಶಾಖೆ ತೆರೆಯುತ್ತಿರುವ ಬಗ್ಗೆ ಸಂತಸ ಹಂಚಿಕೊಂಡರು.

ಕರಾಟೆ: ತೇಜಸ್‌ಗೆ ಎರಡು ಚಿನ್ನದ ಪದಕ
 ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರವು ಇತ್ತೀಚೆಗೆ ನಡೆಸಿದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀರಾಂಪುರದ ಮಹಾವೀರ ವಿದ್ಯಾಮಂದಿರ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಡಿ.ಎಸ್. ತೇಜಸ್ ವೈಯಕ್ತಿಕ ಕತಾ ಮತ್ತು ಕುಮಿತೆ ಎರಡೂ ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿರುತ್ತಾನೆ. ಈತ ಸೆನ್ಸಾಯ್ ಶಿವಣ್ಣ ಅವರ ಬಳಿ ತರಬೇತಿ ಪಡೆಯುತ್ತಿದ್ದಾನೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement