ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ವಾಲ್ಮೀಕಿ ಭವನ ಕಾಮಗಾರಿ ಶೀಘ್ರ ಪೂರ್ಣಕ್ಕೆ ಆಗ್ರಹ

Srinivasa Murthy VN
Updated On : 20 Oct 2013, 11:56 am

ಕ.ಪ್ರ.ವಾರ್ತೆ ಮೈಸೂರು ಅ. 20
ವಿಜಯನಗರದ 2ನೇ ಹಂತದಲ್ಲಿ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಭವನದ ಕಾಮಗಾರಿಯು ಆಮೆಗತಿಯಲ್ಲಿ ಸಾಗುತ್ತಿದ್ದು, ಶೀಘ್ರವಾಗಿ ಪೂರ್ಣಗೊಳಿಸುವಂತೆ ವಿನಾಯಕನಗರದ ನಾಯಕ ಜನಾಂಗದ ಕ್ಷೇಮಾಭಿವೃದ್ಧಿ ಸಂಘ ಆಗ್ರಹಿಸಿದೆ. ಸುಮಾರು 4.75 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಭವನಕ್ಕೆ ಪ.ಪಂಗಡ ಕಲ್ಯಾಣ ಇಲಾಖೆಯು ಎಂಡಿಎಗೆ 2010 ನವೆಂಬರ್ 26ರಲ್ಲೆ 98 ಲಕ್ಷ ಬಿಡುಗಡೆ ಮಾಡಿ, ಟೆಂಡರ್ ಪ್ರಕ್ರಿಯೆ ಹಾಗೂ ನಿರ್ಮಾಣ ಕಾರ್ಯ ಆರಂಭಿಸಿ ಎರಡು ವರ್ಷಗಳೊಳಗೆ ಕಾಮಗಾರಿ ಮುಗಿಸುವಂತೆ ಸೂಚಿಸಿದ್ದರೂ ಸಹ, ಎಂಡಿಎ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯತನದಿಂದ ಕಾಮಗಾರಿಯು ಮಂದಗತಿಯಿಂದ ಸಾಗುತ್ತಿರುವುದಕ್ಕೆ ಸಂಘದ ಕಾರ್ಯದರ್ಶಿ ಪಡುವಾರಹಳ್ಳಿ ಎಂ. ರಾಮಕೃಷ್ಣ ವಿಷಾದಿಸಿದ್ದಾರೆ. ಜಿಲ್ಲಾಡಳಿತವು ಕೂಡಲೆ ಭವನ ನಿರ್ಮಾಣ ಕಾರ್ಯದ ಬಗ್ಗೆ ಗಮನಹರಿಸಿ ಶೀಘ್ರವಾಗಿ ವಾಲ್ಮೀಕಿ ಭವನ ನಿರ್ಮಿಸುವಂತೆ ಒತ್ತಾಯಿಸಿದ್ದಾರೆ.

ಕರಾಟೆಯಲ್ಲಿ ಎರಡು ಚಿನ್ನದ ಪದಕ
ಕ.ಪ್ರ.ವಾರ್ತೆ ಮೈಸೂರು ಅ. 20
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರವು ಇತ್ತೀಚೆಗೆ ನಡೆಸಿದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀರಾಂಪುರದ ಮಹಾವೀರ ವಿದ್ಯಾಮಂದಿರ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಡಿ.ಎಸ್. ತೇಜಸ್ ವೈಯಕ್ತಿಕ ಕತಾ ಮತ್ತು ಕುಮಿತೆ ಎರಡೂ ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿರುತ್ತಾನೆ. ಈತ ಸೆನ್ಸಾಯ್ ಶಿವಣ್ಣ ಅವರ ಬಳಿ ತರಬೇತಿ ಪಡೆಯುತ್ತಿದ್ದಾನೆ.

ಡಾಂಬರೀಕರಣಕ್ಕೆ ಗುದ್ದಲಿ ಪೂಜೆ
ಮೈಸೂರು: ಶ್ರೀರಾಂಪುರ 2ನೇ ಹಂತದ ಕಂದಾಯನಗರ ಬಡಾವಣೆ ರಸ್ತೆ ಹಾಗೂ ಅನ್ನಪೂರ್ಣ ಬಡಾವಣೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಂ.ಕೆ. ಸೋಮಶೇಖರ್ ಅವರು ಭಾನುವಾರ ಗುದ್ದಲಿ ಪೂಜೆ ನೆರವೇರಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ 58 ಲಕ್ಷ ವೆಚ್ಚದಲ್ಲಿ ಈ ರಸ್ತೆಗಳಿಗೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ನಗರ ಪಾಲಿಕೆ ಸದಸ್ಯ ಕೆಂಪಣ್ಣ ಇದ್ದರು. ಪಾದಯಾತ್ರೆ ರದ್ದು: ನಗರ ಪಾಲಿಕೆ ವಾರ್ಡ್ ನಂ.13ರ ವ್ಯಾಪ್ತಿಯ ಚಿಕ್ಕಹರದನಹಳ್ಳಿಯಲ್ಲಿ ಶಾಸಕ ಎಂ.ಕೆ. ಸೋಮಶೇಖರ್ ಅವರು ಭಾನುವಾರ ಹಮ್ಮಿಕೊಂಡಿದ್ದ ಪಾದಯಾತ್ರೆಯು ಮಳೆಯಿಂದಾಗಿ ರದ್ದುಗೊಳಿಸಲಾಗಿತ್ತು.

ಇಂದು ಪೊಲೀಸ್ ಹುತಾತ್ಮರ ದಿನ
ಮೈಸೂರು: ಮೈಸೂರು ನಗರ- ಜಿಲ್ಲಾ ಪೊಲೀಸ್ ಹಾಗೂ ಕರ್ನಾಟಕ ಪೊಲೀಸ್ ಅಕಾಡೆಮಿ ವತಿಯಿಂದ ಅ.21ರ ಬೆಳಗ್ಗೆ 8ಕ್ಕೆ ಎಸ್ಪಿ ಕಚೇರಿ ಬಳಿ ಇರುವ ಪೊಲೀಸ್ ಹುತಾತ್ಮರ ಸ್ಮಾರಕ ಉದ್ಯಾನವನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಏರ್ಪಡಿಸಿದ್ದು, ನಿವೃತ್ತ ಎಡಿಜಿಪಿ ಕೆಂಪಯ್ಯ ಅತಿಥಿಯಾಗಿ ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement