ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಎನ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸ್ಥಳೀಯರನ್ನು ಸೇರಿಸಿ

Srinivasa Murthy VN
Updated On : 23 Oct 2013, 11:49 am

ಎಚ್.ಡಿ. ಕೋಟೆ: ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳಲ್ಲಿ ಸ್ಥಳೀಯ ಗ್ರಾಮಸ್ಥರನ್ನು ಸೇರಿಸಿಕೊಂಡಾಗ ಮಾತ್ರ ಈ ಯೋಜನೆ ಅರ್ಥಪೂರ್ಣವಾಗುತ್ತದೆ ಎಂದು ಮಾಜಿ ಶಾಸಕ ಚಿಕ್ಕಣ್ಣ ಹೇಳಿದರು. ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಮೈಸೂರಿನ ಕುವೆಂಪು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ರಂಗಮಂಟಪದಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ರಾಷ್ಟ್ರೀಯ ಸೇವಾ ಯೋಜನಾ ಅಂತರ ಕಾಲೇಜು ವಾರ್ಷಿಕ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಶಿಬಿರಾರ್ಥಿಗಳು ಕಳೆದ 7 ದಿನಗಳಿಂದ ನಿಮ್ಮ ಗ್ರಾಮದಲ್ಲಿ ಶ್ರಮದಾನದ ಮೂಲಕ ಕೈಗೊಂಡ ಸೇವಾ ಕಾರ್ಯಗಳನ್ನು ಗ್ರಾಮಸ್ಥರು ಮುಂದುವರಿಸಿದಾಗ ಮಾತ್ರ ನಿರ್ಮಾಲ ಗ್ರಾಮವಾಗಲು ಸಾಧ್ಯ ಎಂದು ತಿಳಿಸಿದರು. ಮಾಜಿ ಶಾಸಕ ಎಂ, ಸತ್ಯನಾರಾಯಣ ಮಾತನಾಡಿದರು.  ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಸ್ತೂರಿ ಜನನಿ ಸಂಸ್ಥೆ ವತಿಯಿಂದ ಬಹುಮಾನ ನೀಡಲಾಯಿತು. ಬನುಮಯ್ಯ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಕಾರ್ಯನಿರ್ವಹಣೆಗಾಗಿ ಪರ್ಯಾಯ ಪಾರಿತೋಷಕ ಪಡೆದರು. ಗ್ರಾಪಂ ಅಧ್ಯಕ್ಷೆ ನಿರ್ಮಲ, ಸದಸ್ಯರಾದ ಲಿಂಗರಾಜು, ಶಿವನಾಗಾರ್ಯ, ಸಂಯೋಜನಾಧಿಕಾರಿ ಡಾ.ಎಂ. ರುದ್ರಯ್ಯ, ಪ್ರಾಂಶುಪಾಲ ಡಾ.ಎಸ್. ಇಂದಿರಮ್ಮ, ಪ್ರೊ.ರಾಜೇಶ್ವರಿ, ಪ್ರೊ.ಬಿ.ಪಿ. ಇಂದಿರಾ, ಶಿಬಿರದ ಸಂಯೋಜನಾಧಿಕಾರಿ ಡಾ.ಎಸ್.ಜಿ. ರಾಮದಾಸ ರೆಡ್ಡಿ, ಪ್ರೊ.ಎಚ್.ಎಸ್. ನಿರಂಜನ ಬಾಬು, ಪ್ರೊ.ಡಿ. ಪ್ರಕಾಶ್, ಪ್ರೊ.ಪಿ.ಸಿ. ಕಾಳಪ್ಪ, ಎಂ.ಎನ್. ರವಿಶಂಕರ್, ಮುಕುಂದಾಚಾರ್, ಕಸ್ತೂರಿ ಸತೀಶ್, ಕಸ್ತೂರಿ ಹನುಮೇಶ್, ಕಸ್ತೂರಿ ಸೋಮಾಚಾರ್, ಗ್ರಾಮಸ್ಥರಾದ ನಾಡಗೌಡ ಶಿವಾನಂದ, ನಂದೀಶ್, ರಂಗಯ್ಯ ಭಾಗವಹಿಸಿದ್ದರು.

ಆದಿಬೆಟ್ಟಹಳ್ಳಿಯಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ
ಟಿ. ನರಸೀಪುರ:
ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಸುನಿಲ್ ಬೋಸ್ ಹೇಳಿದರು. ತಾಲೂಕಿನ ಆದಿಬೆಟ್ಟಹಳ್ಳಿ ಗ್ರಾಮದಲ್ಲಿ ಬುಧವಾರ ಕಾವೇರಿ ನೀರಾವರಿ ನಿಗಮದ ವಿಶೇಷ ಘಟಕ ಯೋಜನೆಯಡಿ 30 ಲಕ್ಷ ವೆಚ್ಚದಲ್ಲಿ ಸಿಮೆಂಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಸ್ಥಳೀಯ ಚುನಾಯಿತ ಪ್ರತಿನಿಧಿಗಳೊಂದಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಅಭಿವೃದ್ಧಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಪ್ರಾಮುಖ್ಯತೆ ನೀಡಿ, ಶಾಶ್ವತ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಪೂರಕವಾದ ಯೋಜನೆ ಸರ್ಕಾರ ರೂಪಿಸಿದೆ ಎಂದು ತಿಳಿಸಿದರು. ಜಿಪಂ ಉಪಾಧ್ಯಕ್ಷೆ ಎಸ್.ಭ್ರಮರಾಂಭ, ಜಿಪಂ ಸದಸ್ಯರಾದ ಎಂ.ಸುಧಾ ಮಹದೇವಯ್ಯ, ಕೆ.ಮಹದೇವ, ತಾಪಂ ಸದಸ್ಯೆ ಶಿವಮ್ಮ ಮಹದೇವ, ತಾಪಂ ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನಸ್ವಾಮಿ, ಮಾಜಿ ಸದಸ್ಯ ಕೆ.ಜಿ. ವೀರಣ್ಣ, ವಾಟಾಳು ಗ್ರಾಪಂ ಅಧ್ಯಕ್ಷೆ ಪುಷ್ಪ, ಮಾಜಿ ಅಧ್ಯಕ್ಷ ಎಚ್.ಪಿ. ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎಚ್. ಮಂಜುನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement