ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಬಿಎಸ್‌ವೈ ಸಿಎಂ ಕ್ಷಮೆಯಾಚಿಸಲಿ

Vishwanath S
Updated On : 25 Oct 2013, 12:18 pm

ಕ.ಪ್ರ.ವಾರ್ತೆ ,  ಟಿ.ನರಸೀಪುರ ,  ಅ. 24
ಹಿರಿಯರಾಗಿ ಮಾರ್ಗದರ್ಶನ ನೀಡಬೇಕಿದ್ದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವಾಗ ಏಕವಚನ ಬಳಸಿರುವುದು ರಾಜ್ಯದ ಸಮಸ್ತ ಜನತೆಗೆ ಮಾಡಿದ ಅಪಮಾನವೆಂದು ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಧರ್ಮಸೇನ ಹೇಳಿದರು.
ಮುಖ್ಯಮಂತ್ರಿಯಂತಹ ಉನ್ನತ ಹುದ್ದೆ ಅಲಂಕರಿಸಿದ್ದ ಯಡಿಯೂರಪ್ಪ ಅವರು ಮಾತನಾಡುವಾಗ ಗೌರವಯುತವಾಗಿ ಹೇಳಬಹುದಿತ್ತು. ಅದನ್ನು ಬಿಟ್ಟು ಏಕವಚನದಲ್ಲಿ ಮಾತನಾಡಿರುವುದು ಅವರ ವ್ಯಕ್ತಿತ್ವಕ್ಕೆ ತಕ್ಕುದ್ದಲ್ಲವೆಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.
ಯಡಿಯೂರಪ್ಪ ಅವರು ರಾಜ್ಯದ ಜನತೆಯಲ್ಲಿ ಆಡಿದ ಮಾತುಗಳಿಗಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯರಿಗೆ ನೀಡುವ ಅನುದಾನ ಎರಡು ಜಿಲ್ಲೆಗಳಿಗೂ ಸಾಲದ ಕಾರಣ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಸ್ಥಳೀಯ ಶಾಸಕರು ಹಾಗೂ ಸಂಸದರ ಅನುದಾನವನ್ನು ಕ್ರೋಡೀಕರಿಸಿ ಶಾಶ್ವತ ಯೋಜನೆಗಳನ್ನು ಅನುಷ್ಠಾನಗೊಳಿಸಲು ತಮ್ಮ ಅನುದಾನ ನೀಡುವ ಚಿಂತನೆ ಮಾಡಿರುವುದಾಗಿ ಅವರು ತಿಳಿಸಿದರು. ಇದಕ್ಕೆ ಮುಖ್ಯಮಂತ್ರಿಗಳು ಕೂಡ ಸಮ್ಮತಿಸಿದ್ದಾರೆ. ಪ್ರಸ್ತುತ 25 ಲಕ್ಷ ಅನುದಾನ ನೀಡಲಾಗಿದ್ದು, ಚಾಮರಾಜನಗರ ಜಿಲ್ಲೆಯ ಹಿಂದುಳಿದ ಭಾಗಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ ಅನುದಾನ ಮಂಜೂರು ಮಾಡುತ್ತೇನೆ ಎಂದು ಹೇಳಿದರು.
ಸೋಸಲೆ ಗ್ರಾಪಂ ಅಧ್ಯಕ್ಷ ಎಚ್.ಅಣ್ಣಯ್ಯಸ್ವಾಮಿ, ಖಾಸಗಿ ಬಸ್ ಏಜೆಂಟರ ಸಂಘದ ಅಧ್ಯಕ್ಷ ಪಿ. ಪುಟ್ಟರಾಜು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ್.ಪ್ರಕಾಶ್‌ಕುಮಾರ್, ಕಾರ್ಯದರ್ಶಿ ಬಸವಣ್ಣ, ನಿವೃತ್ತ ಲೆಕ್ಕಾಧಿಕಾರಿ ಬಸವಯ್ಯ ಇದ್ದರು.
ಸಿದ್ದರಾಮಯ್ಯ ವಿರುದ್ಧ ಟೀಕೆಗೆ ಮಲ್ಲೇಗೌಡ ಖಂಡನೆ
ಕೆ.ಆರ್. ನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಏಕವಚನದಲ್ಲಿ ಟೀಕಿಸಿರುವುದನ್ನು ತಾಲೂಕು ಕುರುಬರ ಸಂಘದ ಅಧ್ಯಕ್ಷ ಜಿ.ಎನ್. ಮಲ್ಲೇಗೌಡ ಖಂಡಿಸಿದರು.
ಬಿಎಸ್‌ವೈ ತಾವು ಮಾಜಿ ಮುಖ್ಯಮಂತ್ರಿ ಎಂಬುವುದನ್ನು ಮರೆತು ಏಕವಚನದಲ್ಲಿ ಸಂಬೋಧಿಸುವ ಮೂಲಕ ಸಾರ್ವಜನಿಕ ಕ್ಷೇತ್ರದಲ್ಲಿರಲು ಅನರ್ಹ ವ್ಯಕ್ತಿ ಎಂದು ಸಾಬೀತುಪಡಿಸಿದ್ದಾರೆ. ಇಂತಹ ಬೆಳವಣಿಗೆಗಳು ಒಳ್ಳೆಯದಲ್ಲ. ವ್ಯಕ್ತಿಗೆ ಗೌರವ ನೀಡದಿದ್ದರೂ ವ್ಯಕ್ತಿಯ ಸ್ಥಾನಕ್ಕಾದರೂ ಗೌರವ ನೀಡಬೇಕಿತ್ತು ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸರ್ಕಾರದ ಉತ್ತಮ ಆಡಳಿತ ಕಂಡು ಅಧಿಕಾರ ಇಲ್ಲದೆ ಹತಾಶರಾಗಿರುವ ಬಿಎಸ್‌ವೈ ಮುಖ್ಯಮಂತ್ರಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಿ ಸಿಎಂ ವಿರುದ್ಧ ಗೌರವದಿಂದ ಮಾತನಾಡದಿದ್ದರೆ ಅವರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆಂದು ಎಚ್ಚರಿಸಿದರು.
ಎಪಿಎಂಸಿ ಉಪಾಧ್ಯಕ್ಷ ತೋಟಪ್ಪನಾಯಕ, ಮಾಜಿ ನಿರ್ದೇಶಕ ರಾಜಶೇಖರ್, ಅಹಿಂದ ಸಂಚಾಲಕ ಪ್ರಕಾಶ್, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಜಿ.ಎಂ. ಹೇಮಂತ್, ಕನಕ ಯುವಕ ಸಂಘದ ಅಧ್ಯಕ್ಷ ಅರುಣ್‌ಕುಮಾರ್, ಕಾಳಿದಾಸ ಯುವಸೇನೆ ಕಾರ್ಯದರ್ಶಿ ಕೆ.ಪಿ. ಜಗದೀಶ್, ಮುಖಂಡರಾದ ನಾಗೇಂದ್ರ, ಎಚ್.ಡಿ. ರಾಘವೇಂದ್ರ, ಸೈಯಾದ್ ಜಾಬೀರ್, ರಾಜನಾಯಕ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement