ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನ.5ರೊಳಗೆ ಕೆಜೆಪಿ- ಬಿಜೆಪಿ ವಿಲೀನ ನಿರ್ಧಾರ

Srinivasa Murthy VN
Updated On : 26 Oct 2013, 12:41 pm

ಕ.ಪ್ರ.ವಾರ್ತೆ ನಂಜನಗೂಡು ಅ. 25
ಬಿಜೆಪಿ ಮತ್ತು ಕೆಜೆಪಿ ಪಕ್ಷದ ವಿಲೀನದ ಬಗ್ಗೆ ಇನ್ನೆರಡು ದಿನಗಳಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಷ್ಟ್ರೀಯ ಮುಖಂಡರ ಜೊತೆ ಬೆಂಗಳೂರಿನಲ್ಲಿ ಮಹತ್ತರ ಮಾತುಕತೆ ನಡೆಯಲಿದೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ವಿ. ಸೋಮಣ್ಣ ಹೇಳಿದರು.
ಪಟ್ಟಣದ ಕೆಎಚ್‌ಬಿ ಕಾಲೋನಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯ ಪೂರ್ವಭಾವಿ ಸಿದ್ಧತೆ ಕಾರ್ಯಕ್ರಮ ಹಾಗೂ 17 ರಂದು ಬೆಂಗಳೂರಿಗೆ ಆಗಮಿಸಲಿರುವ ನರೇಂದ್ರ ಮೋದಿ ಅವರ ರ್ಯಾಲಿಯ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಶುಕ್ರವಾರ ಮಾತನಾಡಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಎನ್‌ಡಿಎ ಒಲವು ತೋರಿರುವ ಹಿನ್ನೆಲೆಯಲ್ಲಿ ಬಿ.ಎಸ್. ಯಡಿಯೂರಪ್ಪ ಹಾಗೂ ಅನಂತಕುಮಾರ್ ಮಾತುಕತೆ ಫಲಪ್ರದವಾಗುವ ವಿಶ್ವಾಸ ಇರುವುದರಿಂದ ನ.5 ರೊಳಗೆ ವಿಲೀನ ಪ್ರಕ್ರಿಯೆ ಮುಗಿಯಲಿದೆ ಎಂದು ಸುಳಿವು ನೀಡಿದರು.
ನ.17 ರಂದು ಬೆಂಗಳೂರಿನಲ್ಲಿ ನಡೆಯುವ ನರೇಂದ್ರ ಮೋದಿ ಮಹಾರ್ಯಾಲಿಗೆ ಒಂದೊಂದು ಮಂಡಲದಿಂದ 500 ಕಾರ್ಯಕರ್ತರಂತೆ ರಾಜ್ಯಾದ್ಯಂತ ಲಕ್ಷಾಂತರ ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗವಹಿಸಲು ಸಿದ್ಧತೆ ನಡೆಯುತ್ತಿದೆ ಎಂದು ತಿಳಿಸಿದರು.
ಯುಪಿಎ ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ, ಬೆಲೆ ಏರಿಕೆ, ಹಗರಣಗಳ ಸರಮಾಲೆಯನ್ನು ಸುತ್ತಿಕೊಂಡಿದ್ದು, ಜನತೆ ರೋಸಿ ಹೋಗಿದ್ದಾರೆ. ಇದನ್ನು ಕಾರ್ಯಕರ್ತರಿಗೆ ಮಂಡಲ ಪ್ರತಿನಿಧಿಗಳು ಮನವರಿಕೆ ಮಾಡಿ ರ್ಯಾಲಿಯನ್ನು ಯಶಸ್ವಿಗೊಳಿಸಿ ಹಾಗೂ ಚಾಮರಾಜನಗರ ಮೀಸಲು ಕ್ಷೇತ್ರದಿಂದ ಲೋಕಸಭೆಗೆ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಜ್ಜಾಗಬೇಕೆಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ಮಾಜಿ ಜಿಲ್ಲಾಧ್ಯಕ್ಷ ಸಿದ್ದರಾಜು ಮಾತನಾಡಿ, ಈ ತಿಂಗಳ 30 ಮತ್ತು 31ರಂದು ರಾಜ್ಯಾದ್ಯಂತ ಮಂಡಲಗಳ ಐದು ಲಕ್ಷಕ್ಕೂ ಅಧಿಕ ನೋಂದಣಿ ಅಭಿಯಾನ ನಡೆಸಲಾಗುವುದು. ನ.17ಕ್ಕೆ ಬೆಂಗಳೂರಿಗೆ ಬನ್ನಿ ನರೇಂದ್ರ ಮೋದಿ ರ್ಯಾಲಿಯಲ್ಲಿ ಭಾಗವಹಿಸಿ ಎಂಬ ಘೋಷಣೆ ಮಾಡಲಾಗಿದ್ದು, ಇದರ ಕರಪತ್ರವನ್ನು ಕಾರ್ಯಕರ್ತರು ಮನೆ-ಮನೆಗೆ ಪ್ರಚಾರ ಮಾಡಬೇಕೆಂದು ತಿಳಿಸಿದರು.

ಮಾಜಿ ಸಚಿವ ಮಹದೇವು ಬಿಜೆಪಿಗೆ ಬಂದರೆ ಸ್ವಾಗತ
ನಂಜನಗೂಡು:
ದೇಶದ ಹಿತದೃಷ್ಟಿಯಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಎಲ್ಲ ಮುಖಂಡರ ಅಗತ್ಯ ಇದ್ದು, ಅದರಂತೆಯೆ ಮಾಜಿ ಸಚಿವ ಎಂ.ಮಹದೇವು ಪಕ್ಷಕ್ಕೆ ಬಂದರೆ ನನ್ನ ವೈಯಕ್ತಿಕ ಸ್ವಾಗತವಿದೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದರು.
ಮಹದೇವು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬಿಡುವುದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಅಲ್ಪಮತಗಳ ಅಂತರದಿಂದ ಪರಾಭವಗೊಂಡ ಸಿ.ಎಚ್. ವಿಜಯಶಂಕರ್ ಹಾಗೂ ಎ.ಆರ್. ಕೃಷ್ಣಮೂರ್ತಿ ಅವರಿಗೆ ಟಿಕೆಟ್ ನೀಡುವ ಸಂಭವವಿದೆ ಎಂದು ತಿಳಿಸಿದರು.
ಮಾಜಿ ಸಚಿವ ಸಿ.ಎಚ್. ವಿಜಯಶಂಕರ್, ಮಾಜಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಸಿದ್ದರಾಜು, ನಂಜುಂಡಸ್ವಾಮಿ, ಸಿ.ರಮೇಶ್, ಚಾಮರಾಜನಗರ ಬಿಜೆಪಿ ಅಧ್ಯಕ್ಷ ನಾಗರಾಜಪ್ಪ, ಜಿಪಂ ಸದಸ್ಯ ಡಾ. ಶಿವರಾಂ, ತಾಪಂ ಅಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ, ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ, ಮುಖಂಡರಾದ ನಿಜಗುಣ, ರಾಜು, ಪ್ರಭುಸ್ವಾಮಿ, ಎನ್.ಆರ್. ಕೃಷ್ಣಪ್ಪಗೌಡ, ಸರ್ವಮಂಗಳ ಸೋಮಶೇಖರ್, ಸುರೇಶ್ ಬಾಬು, ಶ್ರೀವಾತ್ಸವ, ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಹೇಂದ್ರ, ಜಿಲ್ಲಾ ಅಲ್ಪಾಸಂಖ್ಯಾತರ ಘಟಕದ ಅಧ್ಯಕ್ಷ ವಾಲ್ಟರ್ ಬುತೇಲೋ, ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಎಂ. ಮಹೇಶ್, ಯುವ ಮೋರ್ಚಾ ಅಧ್ಯಕ್ಷ ವಲಗೆರೆ ರಮೇಶ್, ಸಣ್ಣಯ್ಯ  ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement