ತಾಪಂ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಸಚಿವ
ಟಿ. ನರಸೀಪುರ: ತಾಪಂ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು.
ತಾಪಂ ನೂತನ ಅಧ್ಯಕ್ಷ ಚಿದರವಳ್ಳಿ ನಟರಾಜು ಅವರ ನೇತೃತ್ವದ ತಾಪಂ ಸದಸ್ಯರು ಹಾಗೂ ಮುಖಂಡರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಾಪಂ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಪಕ್ಷಾತೀತವಾಗಿ ಎಲ್ಲಾ ಸದಸ್ಯರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಮಾನವಾಗಿ ಅನುದಾನವನ್ನು ಹಂಚಿಕೆ ಮಾಡುವಂತೆ ಎಂದು ಸಲಹೆ ನೀಡಿದರು.
ಮುಂದಿನ ನ.6ರಂದು ನರಸೀಪುರ ಪಟ್ಟಣದಲ್ಲಿ ಹತ್ತು ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನೆರವೇರಿಸಲಿದ್ದು, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ನರಸೀಪುರ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಗಳ ಪಟ್ಟಿಯನ್ನು ಸಿದ್ಧಪಡಿಸಿ ಕೊಡುವಂತೆ ಸೂಚಿಸಿದರು.
ತಾಪಂಗೆ ನೂತನ ಅಧ್ಯಕ್ಷ ನಟರಾಜು, ಉಪಾಧ್ಯಕ್ಷೆ ಕಮಲಾಕ್ಷಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರಿಗೆ ಹೂವಿನ ಹಾರ ಹಾಕಿ ಕೃತಜ್ಞತೆ ಸಲ್ಲಿಸಿದರು.
ತಾಪಂ ಮಾಜಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನಸ್ವಾಮಿ, ಟಿಎಪಿಎಂಎಸ್ ನಿರ್ದೇಶಕ ಕೆಂಡನಕೊಪ್ಪಲು ಮಹೇಶ್, ಮುಖಂಡರಾದ ಟಿ.ಎಚ್. ಮಂಜುನಾಥ್, ಕೇತಳ್ಳಿ ಸಿದ್ದಶೆಟ್ಟಿ, ಎ. ಶಿವಕುಮಾರ್, ಸಿ. ನಂಜುಂಡಯ್ಯ, ಕುಕ್ಕೂರು ಗಣೇಶ್, ಕಲಿಯೂರು ವೆಂಕಟೇಶ್, ನಾಗರಾಜು, ರಾಜು, ನಂಜುಂಡನಾಯ್ಕ, ಧನಲಕ್ಷ್ಮೀ ನಾಗೇಂದ್ರ, ಚಂದ್ರಕಲಾ ರಾಮ ಇದ್ದರು.