ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನಾಳೆ ರಾಜವೀರ ಮದಕರಿ ನಾಯಕ ನಾಟಕ

Rashmi Kasaragodu
Updated On : 28 Oct 2013, 11:37 am

ಮೈಸೂರು: ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಅಖಿಲ ಕರ್ನಾಟಕ ನಾಯಕ ಜನಾಂಗದ ಹಿತರಕ್ಷಣಾ ವೇದಿಕೆಯು ಅ.30ರಂದು ನಗರದ ಜಗನ್ಮೋಹನ ಅರಮನೆಯಲ್ಲಿ ರಾಜವೀರ ಮದಕರಿ ನಾಯಕ ಎಂಬ ಐತಿಹಾಸಿಕ ನಾಟಕ ಏರ್ಪಡಿಸಿದೆ.
ಅಂದು ಮಧ್ಯಾಹ್ನ 2ಕ್ಕೆ ನಾಟಕವನ್ನು ಎಚ್.ಡಿ. ಕೋಟೆ ಶಾಸಕ ಎಸ್. ಚಿಕ್ಕಮಾದು ಉದ್ಘಾಟಿಸುವರು ಎಂದು ವೇದಿಕೆ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ವಾಲ್ಮೀಕಿ ಭಾವಚಿತ್ರವನ್ನು ಮಾಜಿ ಶಾಸಕ ಚಿಕ್ಕಣ್ಣ ಅನಾವರಣಗೊಳಿಸುವರು. ಶಿರಾದ ಶಿಡ್ಲೆಕೋಣಮಠದ ಸಂಜಯಕುಮಾರ ಸ್ವಾಮಿ ಸಾನ್ನಿಧ್ಯ ವಹಿಸುವರು. ವಿಧಾನ ಪರಿಷತ್ ಸದಸ್ಯ ಸಿದ್ದರಾಜು ಅಧ್ಯಕ್ಷತೆ ವಹಿಸುವರು. ಈ ಸಂದರ್ಭದಲ್ಲಿ ಜಿಲ್ಲೆಯ 17 ಮಂದಿ ರಂಗಭೂಮಿ ಕಲಾವಿದರನ್ನು ಸನ್ಮಾನಿಸಲಾಗುವುದು ಎಂದರು. ಪ್ರಭಾಕರ್ ಹುಣಸೂರು, ಎಸ್. ಶ್ರೀಧರ್ ಚಾಮುಂಡಿಬೆಟ್ಟ, ಪಿ. ಶ್ರೀನಿವಾಸಮೂರ್ತಿ, ರಮ್ಮನಹಳ್ಳಿ ಜವರಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement