ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಅಪಘಾತ; ಇಬ್ಬರ ಸಾವು

Rashmi Kasaragodu
Updated On : 31 Oct 2013, 12:21 pm

ಪಿರಿಯಾಪಟ್ಟಣ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಮಂಚದೇವನಹಳ್ಳಿ ಬಳಿಯ ರಾಷ್ಟೀಯ ಹೆದ್ದಾರಿಯಲ್ಲಿ ಜರುಗಿದೆ. ತಾಲೂಕಿನ ಅರೇನಹಳ್ಳಿ ಗ್ರಾಮದ ನಿವಾಸಿಗಳಾದ ಅರ್ಶಿದಾ ಬಾನು(30) ಹಾಗೂ ಅವರ ಅಕ್ಕನ ಮಗಳು ಸಾಜಿಯಾ(9) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್ ಚಾಲನೆ ಮಾಡುತ್ತಿದ್ದ ಅರ್ಶಿಯಾಬಾನು ಪತಿ ಇನಾಯಿದ್ಪಾಷಾ ಅವರ ಬಲಗಾಲು ಮುರುದುಹೋಗಿದ್ದು ಕುಶಾಲನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ಕುಶಾಲನಗರದ ಕಡೆಯಿಂದ ಪಿರಿಯಾಪಟ್ಟಣಕ್ಕೆ ತೆರಳುತಿದ್ದ ಇನಾಯಿದ್ ಪಾಷಾ ಬೈಕಿಗೆ ಪಿರಿಯಾಪಟ್ಟಣದ ಕಡೆಯಿಂದ ಕುಶಾಲನಗರದ ಕಡೆಗೆ ತೆರಳುತಿದ್ದ ಇಂಡಿಗೂ ಕಾರು ಮಂಚದೇವನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಕ್ಕಿ ಹೊಡಿದಿದೆ. ಚಾಲಕ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ. ವೃತ್ತ ನಿರೀಕ್ಷಕ ಪ್ರಸನ್ನಕುಮಾರ್, ಎಸ್ಐ ರಾಮನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಬೈಲುಕುಪ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement