ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನೆಲಕ್ಕುರುಳಿದ ವಿದ್ಯುತ್ ಕಂಬಗಳು

Rashmi Kasaragodu
Updated On : 31 Oct 2013, 12:21 pm

ಮೈಸೂರು: ಲಾರಿ ಡಿಕ್ಕಿಯಾಗಿ ವಿದ್ಯುತ್ ಕಂಬಗಳು ನೆಲಕ್ಕುರುಳಿರುವ ಘಟನೆ ನಜರ್ಬಾದ್ ಮುಖ್ಯರಸ್ತೆಯಲ್ಲಿ ಬುಧವಾರ ನಡೆದಿದೆ. ಎಸ್ಪಿ ಕಚೇರಿ ಕಡೆಯಿಂದ ನಜರ್ಬಾದ್ ಕಡೆಗೆ ಬಂದ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಮೂರು ಕಂಬಗಳು ತುಂಡಾಗಿ ಬಿದ್ದಿವೆ. ಅನಾಹುತ ಸಂಭವಿಸಿಲ್ಲ. ಸ್ಥಳಕ್ಕಾಗಮಿಸಿದ ಪೊಲೀಸರು, ಸೆಸ್ಕ್ ಸಿಬ್ಬಂದಿ ವಿದ್ಯುತ್ ಸ್ಥಗಿತಗೊಳಿಸಿದರು.


ವೇದಿಕೆಗೆ ನೇಮಕ
ಮೈಸೂರು: ಮೈಸೂರು ಜಿಲ್ಲಾ ವಿಶ್ವಕರ್ಮ ಯುವ ಜಾಗೃತಿ ವೇದಿಕೆಯ ಉಪಾಧ್ಯಕ್ಷರಾಗಿ ಎಂ. ಅವಿನಾಶ್, ಸಂಘಟನಾ ಕಾರ್ಯದರ್ಶಿಯಾಗಿ ಬಸವರಾಜು, ಸಹ ಕಾರ್ಯದರ್ಶಿಯಾಗಿ ಪಿ. ಸುರೇಶ್ ನೇಮಕವಾಗಿದ್ದಾರೆ.
ನಾಳೆ  ಸಂಘಟನಾ ಕಾರ್ಯಾಗಾರ
ಮೈಸೂರು: ಅಖಿಲ ಕರ್ನಾಟಕ ಹೊಯ್ಸಳ ಕರ್ನಾಟಕ ಸಂಘಗಳ ಸಂಘಟನಾ ಕಾರ್ಯಾಗಾರವು ನ.1ರ ಬೆಳಗ್ಗೆ 11ಕ್ಕೆ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸಂಘದ ಕಟ್ಟಡದಲ್ಲಿ ನಡೆಯಲಿದ್ದು, ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಉದ್ಘಾಟಿಸುವರು. ಶಕುಂತಲಾ ಶಂಕರನಾರಾಯಣ ಅಧ್ಯಕ್ಷತೆ ವಹಿಸುವರು ಎಂದು ಅಧ್ಯಕ್ಷ ಪಿ.ವಿ. ಭಾರದ್ವಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement