ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಗ್ರಾಪಂ ಸದಸ್ಯರು ಕಾಂಗ್ರೆಸ್ಗೆ ಸೇರ್ಪಡೆ

Rashmi Kasaragodu
Updated On : 31 Oct 2013, 11:53 am

ಕಿತ್ತೂರು: ಮುಂಬರುವ ಲೋಕಸಭಾ ಚುನಾವಣಾ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಂತೆ ಕಾರ್ಯಕರ್ತರಿಗೆ ಶಾಸಕ ಕೆ. ವೆಂಕಟೇಶ್ ಪುತ್ರ ನಿತಿನ್ ವೆಂಕಟೇಶ್ ಕರೆ ನೀಡಿದರು.
ಗ್ರಾಮದ ನಿಂಗಮ್ಮ ಚನ್ನೇಗೌಡ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಗ್ರಾಪಂ ಸದಸ್ಯರ ಕಾಂಗ್ರೆಸ್ಗೆ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತತ್ವ, ಆದರ್ಶಗಳನ್ನು ಹಾಗೂ ಶಾಸಕ ಕೆ. ವೆಂಕಟೇಶ್ ಅವರ ನಾಯಕತ್ವ ಒಪ್ಪಿ ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ತುಂಬಾ ಸಂತೋಷದ ವಿಷಯ ಎಂದು ಹೇಳಿದರು. ಜಿಪಂ ಮಾಜಿ ಉಪಾಧ್ಯಕ್ಷ ಕೆ.ಸಿ. ಕೃಷ್ಣಪ್ಪ ಮಾತನಾಡಿದರು. ಕಿತ್ತೂರಿನ ಜೆಡಿಎಸ್ ಬೆಂಬಲಿತ ಗ್ರಾಪಂ ಸದಸ್ಯರಾದ ಜಮೀರ್, ರೇಣುಕಮ್ಮ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಎಪಿಎಂಸಿ ಅಧ್ಯಕ್ಷ ಕೆ. ಹೊಲದಪ್ಪ, ಮಾಜಿ ಅಧ್ಯಕ್ಷ ಜಯಚಂದ್ರ, ಗ್ರಾಪಂ ಅಧ್ಯಕ್ಷೆ ಮಂಜುಳಾ ರಘು,  ಮಂಜುನಾಥ್ ಇದ್ದರು.


ಲಾರಿಗೆ  ಬೈಕ್ ಡಿಕ್ಕಿ; ವ್ಯಕ್ತಿ ಸಾವು
ಕೆ.ಆರ್. ನಗರ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟು, ಮತ್ತೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ದೊಡ್ಡೆಕೊಪ್ಪಲು ಗ್ರಾಮದ ಬಳಿ  ಬುಧವಾರ ರಾತ್ರಿ ಜರುಗಿದೆ. ಹುಣಸೂರು ತಾಲೂಕಿನ ತುಳಸಿಕೊಪ್ಪಲು ಗ್ರಾಮದ ರಾಜೇಗೌಡರ ಪುತ್ರ ರವಿಕುಮಾರ್(24) ಮೃತಪಟ್ಟ ದುರ್ದೈವಿಯಾಗಿದ್ದು, ಶಿವರಾಜೇಗೌಡ ಎಂಬವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಜೂಜಾಡುತ್ತಿದ್ದ 11 ಮಂದಿ ಸೆರೆ
ಕೆ.ಆರ್. ನಗರ: ಪಟ್ಟಣದ ವಸತಿ ಗೃಹದ ಮೇಲೆ ಪೊಲೀಸರು ಬುಧವಾರ ದಾಳಿ ನಡೆಸಿ, ಅಕ್ರಮವಾಗಿ ಜೂಜಾಡುತ್ತಿದ್ದ 11 ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ 41 ಸಾವಿರ ವಶಪಡಿಸಿಕೊಂಡಿದ್ದಾರೆ. ಪ್ರವಾಸಿ ಮಂದಿರದ ಮುಂದೆ ಇರುವ ಚಾಮುಂಡೇಶ್ವರಿ ವಸತಿ ಗೃಹದಲ್ಲಿ ಜೂಜಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಸರ್ಕಲ್ ಇನ್ಸ್ಪೆಕ್ಟರ್ ಎಚ್.ಎನ್. ಸಿದ್ದಯ್ಯ ಅವರ ನೇತೃತ್ವದಲ್ಲಿ ಎಸ್ಐಗಳಾದ ಷಣ್ಮುಗಂ ಮತ್ತು ವನರಾಜು ಅವರು ದಾಳಿ ನಡೆಸಿದರು. ಬಂಧಿತರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement