ಎಸ್ಟಿ ನಿಗಮ ಅಧಿಕಾರಿ ಅಮಾನತು
ಮೈಸೂರು: ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಗೆ ಆಗಮಿಸಿದ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ಮಟ್ಟದ ಅಧಿಕಾರಿ ರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದರು.
ವಿವಿಧ ನಿಗಮ ಮಂಡಳಿಗಳಿಂದ ಅಲ್ಪಸಂಖ್ಯಾತರು, ಪರಿಶಿಷ್ಟರು, ಹಿಂದುಳಿದವರು ಪಡೆದಿದ್ದ ಸಾಲವನ್ನು ಮನ್ನಾ ಮಾಡಿ 3 ತಿಂಗಳಾದರೂ ಅಧಿಕಾರಿಗಳು ಇನ್ನೂ ಫಲಾನುಭವಿಗಳಿಗೆ ಪತ್ರ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದವರು ಸಾಲ ಮನ್ನಾ ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಿದ್ದಾರೆ. ಆದರೆ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದವರು ಇನ್ನೂ ಸಾಲ ಮನ್ನಾ ಪೂರ್ಣಗೊಳಿಸಿಲ್ಲ. ಇನ್ನೊಂದು ವಾರದೊಳಗೆ ಸಾಲಮನ್ನಾ ಮಾಡದಿದ್ದರೆ ಅಮಾನತುಗೊಳಿಸುವುದಾಗಿ ಸಿದ್ದರಾಮಯ್ಯ ಎಚ್ಚರಿಸಿದರು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಅಧಿಕಾರಿ ರಾಜು ಸಭೆಗೆ ಗೈರಾಗಿರುವುದನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆ ಅಧಿಕಾರಿಯನ್ನು ಸಂಬಂಧಪಟ್ಟವರು ತಕ್ಷಣ ಅಮಾನತುಗೊಳಿಸುವಂತೆ ಆದೇಶಿಸಿದರು.