ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಬಾಲಕಿ ಮೇಲೆ ಅತ್ಯಾಚಾರ: 7 ವರ್ಷ ಜೈಲು

Rashmi Kasaragodu
Updated On : 3 Sept 2013, 12:40 pm

ಕ.ಪ್ರ.ವಾರ್ತೆ   ಮೈಸೂರು   ಸೆ. 2
ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ ಇದಕ್ಕೆ ಸಹಕರಿಸಿದ ಮತ್ತೊಬ್ಬನಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಮೈಸೂರಿನ ನ್ಯಾಯಾಲಯವು ತೀರ್ಪು ನೀಡಿದೆ.
ನಂಜನಗೂಡು ತಾಲೂಕು ಕೆಲ್ಲುಪುರ ನಿವಾಸಿ ಶಿವಪ್ಪ ಎಂಬವರ ಪುತ್ರ ಕೆಂಪರಾಜು ಅ. ಜೀತು ಮತ್ತು ಮೈಸೂರು ತಾಲೂಕು ಜಯಪುರ ಹೋಬಳಿ ಯಡಳ್ಳಿ ಚಿಕ್ಕನಂಜಪ್ಪ ಪುತ್ರ ನಂಜುಂಡ ಶಿಕ್ಷೆಗೆ ಗುರಿಯಾದವರು.
ತನ್ನದೇ ಗ್ರಾಮದ ಬಾಲಕಿಯನ್ನು ತನಗೆ ಮದುವೆ ಮಾಡಿಕೊಡುವಂತೆ ಕೆಂಪರಾಜು ಬಾಲಕಿ ಪೋಷಕರನ್ನು ಕೇಳಿದ್ದ. ಇದಕ್ಕೆ ಅವರು ಒಪ್ಪಿರಲಿಲ್ಲ. ಈ ದ್ವೇಷದಿಂದ ಕೆಂಪರಾಜು ಬಾಲಕಿಯನ್ನು 2010ರ ಸೆ.16 ರಂದು ಅಪಹರಿಸಿ ಅತ್ಯಾಚಾರ ಎಸಗಿದ್ದ. ಬಾಲಕಿ ಅಪಹರಣಕ್ಕೆ ನಂಜುಂಡ ಸಹಾಯ ಮಾಡಿದ್ದ. ಈ ಸಂಬಂಧ ಹುಲ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ತನಿಖೆ ನಡೆಸಿದ ಆಗಿನ ಇನ್ಸ್ಪೆಕ್ಟರ್ ಪ್ರಮೋದ್ಕುಮಾರ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಎಂ. ಶ್ರೀದೇವಿ ಅವರು ವಿಚಾರಣೆ ನಡೆಸಿ ಆರೋಪಿಗಳು ಅಪರಾಧ ಎಸಗಿರುವುದು ಸಾಬೀತಾಗಿದೆ ಎಂದು ಕೆಂಪರಾಜುಗೆ 7 ವರ್ಷ ಜೈಲು ಶಿಕ್ಷೆ, 15 ಸಾವಿರ ದಂಡ ಹಾಗೂ ನಂಜುಂಡಗೆ 2 ವರ್ಷ ಜೈಲು ಶಿಕ್ಷೆ, 5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ, ವಸೂಲಾದ ದಂಡದಲ್ಲಿ ನೊಂದ ಬಾಲಕಿಗೆ ಪರಿಹಾರವಾಗಿ 15 ಸಾವಿರ ನೀಡಲು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ 2ನೇ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಎಚ್.ಇ. ಚಿನ್ನಪ್ಪ ವಾದಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement