ಮಲ್ಲಾರಾಧ್ಯ
ಪಿರಿಯಾಪಟ್ಟಣ: ತಾಲೂಕಿನ ಬೆಕ್ಕರೆ ಗ್ರಾಮದ ನಿವೃತ್ತ ಶಿಕ್ಷಕ ಬಿ. ಮಲ್ಲಾರಾಧ್ಯ (82) ಸೋಮವಾರ ನಿಧನರಾದರು. ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಲ್ಲಾರಾಧ್ಯರ ಶಿಕ್ಷಣ ಸೇವೆ ಗುರುತಿಸಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ನಿವೃತ್ತಿಯ ಬಳಿಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದರು. ಮೃತರಿಗೆ ಒಬ್ಬ ಪುತ್ರ ಹಾಗೂ ಒಬ್ಬರು ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಮಾದಮ್ಮ
ತಾಂಡವಪುರ: ತಾಪಂ ಮಾಜಿ ಸದಸ್ಯ ಸಿ.ಆರ್. ಮಹದೇವು ಅವರ ತಾಯಿ ಮಾದಮ್ಮ (70) ಸೋಮವಾರ ಬೆಳಗಿನ ಜಾವ ನಂಜನಗೂಡು ತಾಲೂಕು ಚಿನ್ನಂಬಳ್ಳಿ ಗ್ರಾಮದಲ್ಲಿ ನಿಧನರಾದರು. ಮೃತರಿಗೆ ಪತಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಸಂಸ್ಕಾರ ಸೋಮವಾರ ಮಧ್ಯಾಹ್ನ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಿತು. ಜಿಪಂ ಸದಸ್ಯರಾದ ಗೀತಾ ಧರ್ಮೇಂದ್ರ ರಾಜು, ತಾಪಂ ಸದಸ್ಯರಾದ ಹೆಜ್ಜಿಗೆ ಗೋವಿಂದರಾಜನ್, ಎಂ.ಆರ್. ಪುಟ್ಟಸ್ವಾಮಿ, ಜಿಪಂ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಮುಖಂಡರಾದ ಟಿ.ಕೆ. ಮಾಲೇಗೌಡ, ಚಿನ್ನದಗುಡಿ ಹುಂಡಿ ಬಸವೇಗೌಡ, ಕೆಂಪಣ್ಣ, ಉದ್ಯಮಿ ಇಂಧನ್ಬಾಬು ಸಂತಾಪ ಸೂಚಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.