ಸಂಘಕ್ಕೆ ಆಯ್ಕೆ
ಪಿರಿಯಾಪಟ್ಟಣ: ತಾಲೂಕಿನ ಕಂಪಲಾಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕೆಳಕಂಡವರು ಆಯ್ಕೆಯಾಗಿದ್ದಾರೆ. ಸಂಘದಲ್ಲಿ ಒಟ್ಟು 10 ಸ್ಥಾನಗಳಿದ್ದು, ಸಾಲಗಾರರ ಕ್ಷೇತ್ರದಿಂದ ಕೆ.ಸಿ. ರಾಜೇಗೌಡ, ಗುರುಸಿದ್ದಪ್ಪ, ಪ್ರಕಾಶ್, ಪುಟ್ಟೇಗೌಡ, ಬಿ.ಪಿ. ರಾಮೇಗೌಡ, ಪ.ಜಾತಿ, ಪಂಗಡದಿಂದ ರವಿ, ಹಿಂದುಳಿದ ವರ್ಗ ಎ ದಿಂದ ಸ್ವಾಮಿಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಸುನಂದಮ್ಮ, ಶಿವಮ್ಮ ಆಯ್ಕೆಯಾಗಿದ್ದು, ಸಾಲಗಾರರಲ್ಲದ ಕ್ಷೇತ್ರದಿಂದ ಕೆ.ವಿ. ರವಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಎಚ್.ಕೆ. ಪುಟ್ಟಸ್ವಾಮಿಗೌಡ ಕರ್ತವ್ಯ ನಿರ್ವಹಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.