ಮಹಿಳೆ ಸಾವು
ಮೈಸೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಗಳೊಂದಿಗೆ ಕೆ.ಆರ್. ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಮೈಸೂರು ತಾಲೂಕು ಹಾರೋಹಳ್ಳಿ ನಿವಾಸಿ ರಾಜಯ್ಯ ಎಂಬವರ ಪುತ್ರಿ ಮಂಗಳಮ್ಮ (45) ಮೃತಪಟ್ಟವರು. ಇವರಿಗೆ ವಿವಾಹವಾಗಿರಲಿಲ್ಲ. ಮೂರು ದಿನಗಳ ಹಿಂದೆ ಸೀಮೆಎಣ್ಣೆ ಸ್ಟೌವ್ ಹಚ್ಚುವ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿ ಗಾಯಗೊಂಡಿದ್ದರು. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದತ್ತು ಸ್ವೀಕಾರ
ಮೈಸೂರು: ಚಾಮರಾಜೇಂದ್ರ ಮೃಗಾಲಯದ ಪ್ರಾಣಿಗಳ ದತ್ತು ಸ್ವೀಕಾರ ಯೋಜನೆಯಡಿ ನಗರದ ಆರ್. ಶ್ರೀನಿಧಿ ಅವರು ಗ್ರೇ ಪ್ಯಾರೆಟ್ ಹಾಗೂ ಬೆಂಗಳೂರಿನ ಕಾರ್ತಿಕ್ ಮತ್ತು ರಶ್ಮಿ ಅವರು ಶಾಂತಾ- ಚಿರತೆಯನ್ನು ಒಂದು ವರ್ಷದ ಅವಧಿಗೆ ದತ್ತು ಸ್ವೀಕರಿಸಿದ್ದಾರೆ ಎಂದು ಮೃಗಾಲಯ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ರವಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.