ಜೂಜುಕೋರರ ಬಂಧನ
ಟಿ. ನರಸೀಪುರ: ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಏಳು ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಹಿರಿಯೂರು ಗ್ರಾಮದ ದೊರೆಸ್ವಾಮಿ ಎಂಬವರ ಮನೆಯ ಹಿಂಭಾಗದಲ್ಲಿ ಜೂಜಾಟ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಎಸ್ಐ ಕೆ.ಆರ್. ಗೋಪಿಕೃಷ್ಣ ಅವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಜೂಜಾಡುತ್ತಿದ್ದ ಏಳು ಮಂದಿ ಬಂಧಿಸಿ ಪಣಕ್ಕಿಟ್ಟಿದ್ದ 14,850 ನಗದು ವಶ ಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಪೇದೆಗಳಾದ ಜವರೇಶ್, ಶ್ರೀನಿವಾಸ್, ಯೋಗೇಶ್, ರವೀಶ್, ಶಿವಸ್ವಾಮಿ, ಗೋಪಾಲಸ್ವಾಮಿ, ಪ್ರಭು, ಮಂಜು, ಚಾಲಕ ಸುರೇಶ್ರಾವ್ ಭಾಗವಹಿಸಿದ್ದರು.
ಗಾಂಜಾ ಗಿಡಗಳ ಜಪ್ತಿ
ಪಿರಿಯಾಪಟ್ಟಣ: ಅಕ್ರಮವಾಗಿ ಬೆಳೆದಿದ್ದ 1.5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಚೌತಿ ಗ್ರಾಮದ ಕೃಷ್ಣಯ್ಯ ಎಂಬವರು ಮನೆಯ ಹಿಂಭಾಗದ ಹಿತ್ತಲಿನಲ್ಲಿ ಬೆಳೆದಿದ್ದ ಸುಮಾರು 5 ಕೆಜಿ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಕೃಷ್ಣಯ್ಯ ಪರಾರಿಯಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅಬಕಾರಿ ಇಲಾಖೆಯ ಅಧಿಕಾರಿಗಳು ಆರೋಪಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ವಿಷ ಸೇವಿಸಿ ಆತ್ಮಹತ್ಯೆ
ಪಿರಿಯಾಪಟ್ಟಣ: ಅಪರಿಚಿತ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ಜರುಗಿದೆ. ಇಲ್ಲಿನ ಗೋಣಿಕೊಪ್ಪ ರಸ್ತೆಯ ಈದ್ಗಾ ಮೈದಾನದಲ್ಲಿ ಸುಮಾರು 43 ವರ್ಷದ ವ್ಯಕ್ತಿಯು ವಿಷ ಸೇವಿಸಿ ಮೃತಪಟ್ಟಿದ್ದು, ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತದೇಹದ ಸಮೀಪ ಮದ್ಯ ಹಾಗೂ ವಿಷದ ಬಾಟಲು ಸಿಕ್ಕಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.