ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಯಶಸ್ವಿನಿ ಯೋಜನೆ ಲಾಭ ಪಡೆಯುವಂತೆ ಮನವಿ

Rashmi Kasaragodu
Updated On : 7 Sept 2013, 12:51 pm

ಕ.ಪ್ರ. ವಾರ್ತೆ   ಹುಣಸೂರು   ಸೆ.6
ಮೈಸೂರು ಜಿಲ್ಲೆಯಲ್ಲಿ ಯಶಸ್ವಿನಿ ಯೋಜನೆಯನ್ನು ಪೈಲಟ್ ಯೋಜನೆಯಾಗಿ ಜಾರಿಗೆ ತಂದಿದ್ದು, ಸಹಕಾರಿಗಳು ಯೋಜನೆಯ ಬಗ್ಗೆ ಫಲಾನುಭವಿಗಳಿಗೆ ಅರಿವು ಮೂಡಿಸುವ ಮೂಲಕ, ಪ್ರತಿಯೊಬ್ಬರಿಗೂ ಯೋಜನೆಯ ಸವಲತ್ತು ದೊರೆಯುವಂತೆ ಮಾಡಬೇಕೆಂದು ಜಿಲ್ಲಾ ಸಹಕಾರ ಸಂಘಗಳ ನಿಬಂಧಕ ಎಚ್.ಸಿ. ಜೋಷಿ ಕರೆ ನೀಡಿದರು.
ಇಲ್ಲಿನ ಎಸ್ಎಲ್ವಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಸಹಕಾರ ಸಂಘಗಳ ಸದಸ್ಯರು, ಕಾರ್ಯದರ್ಶಿಗಳು ಹಾಗೂ ಯಶಸ್ವಿನಿ ಫಲಾನುಭವಿಗಳಿಗೆ ಆಯೋಜಿಸಿದ್ದ ಯಶಸ್ವಿನಿ ಯೋಜನೆ ಕುರಿತಾದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಪೈಲಟ್ ಯೋಜನೆಯಾಗಿ ಕೈಗೊಂಡು ಸಂಬಂಧಿಸಿದ ವೈದ್ಯರಿಗೆ ಯೋಜನೆಯ ಜಾರಿ ಕುರಿತಂತೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಹಾಗೂ ಫಲಾನುಭವಿಗಳಿಗೆ ಆಸ್ಪತ್ರೆಗಳಲ್ಲಿ ಸೂಕ್ತ ಸೌಲಭ್ಯಗಳನ್ನು ಕಲ್ಪಿಸಲು ಸೂಚಿಸಲಾಗುತ್ತದೆ ಎಂದು ಹೇಳಿದರು.
ಕೇವಲ 10 ಮಾತ್ರ: ಜಿಲ್ಲೆಯಲ್ಲಿ ಎಸ್ಸಿ, ಎಸ್ಟಿ ಜನಾಂಗದವರಿಗೆ ಕೇವಲ 10 ಹಣ ಪಡೆದು ಯಶಸ್ವಿನಿ ಯೋಜನೆಗೆ ಸೇರ್ಪಡೆ ಮಾಡಿಕೊಳ್ಳುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ ಎಸ್ಸಿ, ಎಸ್ಟಿ ಜನಾಂಗದ ಫಲಾನುಭವಿಗಳು 210 ನೀಡಿ ಹೆಸರು ನೋಂದಾಯಿಸಿಕೊಂಡಿದ್ದರೆ ಅಂತಹವರ ಉಳಿತಾಯ ಖಾತೆಗೆ 200 ಜಮಾ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾಧಿಕಾರಿ ಹಾಗೂ ಇನ್ನಿತರ ಅಧಿಕಾರಿಗಳು ಯಶಸ್ವಿನಿ ಯೋಜನೆಯ ವ್ಯಾಪ್ತಿಯಲ್ಲಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಎಲ್ಲ ಸಹಕಾರ ಸಂಘಗಳು ಸೆ.25ರೊಳಗೆ ಸರ್ವಸದಸ್ಯರ ಸಭೆ ನಡೆಸಬೇಕು. ಇಲ್ಲದಿದ್ದರೆ 5 ಸಾವಿರ ದಂಡ ಹಾಗೂ 6 ತಿಂಗಳ ಜೈಲುವಾಸ ಶಿಕ್ಷೆ ಅನುಭವಿಸಬೇಕಾಗಬಹುದು ಎಂದು ಎಚ್ಚರಿಕೆ ನೀಡಿದರು.
ನಿರ್ದೇಶಕ ರಾಮಕೃಷ್ಣೇಗೌಡ, ಸಣ್ಣ ತಮ್ಮೇಗೌಡ, ಹುಣಸೂರು ಸಹಕಾರ ಸಂಘಗಳ ಶಾಖೆಯ ಉಪನಿಬಂಧಕ ವರದೇಗೌಡ, ಅಭಿವೃದ್ಧಿ ಅಧಿಕಾರಿ ಸುಬ್ರಮಣ್ಯಂ, ಸಹಕಾರ ಸಂಘದ ನಿರ್ದೇಶಕರು, ಸದಸ್ಯರು, ಕಾರ್ಯದರ್ಶಿಗಳು ಭಾಗವಹಿಸಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement