ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಹನಗೋಡಿನಲ್ಲಿ ದಂತ ತಪಾಸಣೆ ಶಿಬಿರ

Rashmi Kasaragodu
Updated On : 8 Sept 2013, 10:55 am

ಕ.ಪ್ರ. ವಾರ್ತೆ, ಹುಣಸೂರು, ಸೆ.8
ರೋಟರಿ ಸಂಸ್ಥೆಯ ವತಿಯಿಂದ ಆರೋಗ್ಯ ಶಿಬಿರ ಆಯೋಜಿಸುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಮುಂದಾಗುತ್ತಿದೆ. ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ರೋಟರಿ ಸಂಸ್ಥೆ ಅಧ್ಯಕ್ಷ ರಾಜಶೇಖರ್ ಕರೆ ನೀಡಿದರು.
ತಾಲೂಕಿನ ಹನಗೋಡಿನಲ್ಲಿ ರೋಟರಿ ಸಂಸ್ಥೆಯು ಗ್ರಾಪಂ, ವರ್ತಕರ ಸಂಘ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದೊಂದಿಗೆ ಆಯೋಜಿಸಿದ್ದ ಉಚಿತ ದಂತ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯ ಶಿಬಿರಗಳು ಸೇರಿದಂತೆ ಪೊಲೀಯೋ ನಿರ್ಮೂಲನೆ ಮಾಡುವಲ್ಲಿ ರೋಟರಿ ಸಂಸ್ಥೆಯ ಕೊಡುಗೆ ಇದೆ. ಮುಂದೆಯೂ ಇಂತಹ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು. ಕೊಡಗು ದಂತ ಮಹಾವಿದ್ಯಾಲಯದ ವೈದ್ಯಾಧಿಕಾರಿ ಡಾ.ಶಿಲ್ಪಾ, ಹಲ್ಲಿನ ರಕ್ಷಣೆ ಕುರಿತು ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ದಂತ ವೈದ್ಯ ಡಾ. ಮರೀಗೌಡ ಸಹ ಹಲ್ಲಿನ ಆರೋಗ್ಯ ಕುರಿತು ಮಾತನಾಡಿದರು.
ಶಿಬಿರದಲ್ಲಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ 142 ಮಂದಿ ತಪಾಸಣೆಗೊಳಗಾದರು. ಒಂದು ಮಗು ಸೀಳುತುಟಿ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದೆ. ಹಲವು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗೆ ವಿರಾಜಪೇಟೆಯ ದಂತ ವಿದ್ಯಾಲಯಕ್ಕೆ ಬರುವಂತೆ ಸೂಚಿಸಲಾಯಿತು.
ಗ್ರಾಪಂ ಅಧ್ಯಕ್ಷೆ ಮಂಜುಳ ಮಹೇಶ್, ಸದಸ್ಯೆ ನಾಗಮ್ಮ, ಪಿಡಿಒ ಮಣಿ, ರೋಟರಿ ಶಾಲಾ ಸಮಿತಿ ಅಧ್ಯಕ್ಷ ಆರ್. ಆನಂದ್, ಕಾರ್ಯದರ್ಶಿ ಹನಗೋಡು ನಟರಾಜ್, ವರ್ತಕರ ಸಂಘದ ಅಧ್ಯಕ್ಷ ಮಹೇಂದ್ರ, ಕಾರ್ಯದರ್ಶಿ ಎಚ್.ಬಿ. ಹನುಮಂತು, ಗ್ರಾಮಾಭಿವೃದ್ಧಿ ಯೋಜನೆಯ ರಾಘವೇಂದ್ರ, ಶಾಲಾ ಮುಖ್ಯಶಿಕ್ಷಕ ರಾಜು, ರೋಟರಿಯನ್ನರಾದ ಡಾ. ಮರೀಗೌಡ, ಶಿವಕುಮಾರ್, ರಘು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement