ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನಿಯಂತ್ರಣ ತಪ್ಪಿ ಬಿದ್ದ ಬೈಕ್ ಉದ್ಬೂರು ಯುವಕ ಸಾವು

Rashmi Kasaragodu
Updated On : 12 Sept 2013, 12:20 pm

ಕ.ಪ್ರ.ವಾರ್ತೆ   ಮೈಸೂರು   ಸೆ. 11
ಒಂದೇ ಬೈಕಿನಲ್ಲಿ ಮೂವರು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಒಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. ಮೈಸೂರು ತಾಲೂಕು ಉದ್ಬೂರು ನಿವಾಸಿ ಚಿಕ್ಕನಾಯಕ ಎಂಬವರ ಪುತ್ರ ಲೋಕೇಶ್ (22) ಮೃತಪಟ್ಟವರು. ಮಹದೇವನಾಯಕ ಎಂಬವರ ಪುತ್ರ ನಿಂಗಣ್ಣ (19) ಮತ್ತು ರಾಜು ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉದ್ಬೂರು ಗೇಟ್ ಎಚ್ವಿ ಗ್ಯಾಸ್ ಏಜೆನ್ಸಿ ಬಳಿ ಬೈಕಿನಲ್ಲಿ ಮೂವರು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ಲೋಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅಪಘಾತ ಆದ ವಿಚಾರವನ್ನು ಪೊಲೀಸರಿಗೆ ತಿಳಿಸಿದೇ, ಲೋಕೇಶ್ ಅಂತ್ಯಕ್ರಿಯೆ ಮಾಡಿ ಮುಗಿಸಿದ್ದಾರೆ. ಈ ವಿಚಾರ ತಿಳಿದು ಜಯಪುರ ಠಾಣೆ ಎಸ್ಐ ನಂಜಪ್ಪ ಮತ್ತು ಸಿಬ್ಬಂದಿ ಅಪಘಾತ ಹಾಗೂ ಪೊಲೀಸರಿಗೆ ಮಾಹಿತಿ ನೀಡದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement