ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಬಸ್- ಬೈಕ್ ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

Mainashree
Updated On : 12 Sept 2013, 12:10 pm

ಕ.ಪ್ರ.ವಾರ್ತೆ  ಪಿರಿಯಾಪಟ್ಟಣ ಸೆ. 11
ತಾಲೂಕಿನ ಕಿರನಹಳ್ಳಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ಜರುಗಿದೆ.
ತಾಲೂಕಿನ ಕಿರನಹಳ್ಳಿ ಗೇಟ್ ಹಕ್ಕಿಗುಡ್ಲು ನಿವಾಸಿಗಳಾದ ಅಪ್ಪಾಜಿಗೌಡ (50), ರುಕ್ಮಿಣಿ (47), ಆಶಾ (23) ಮೃತಪಟ್ಟವರು. ಮೈಸೂರು ಕಡೆಯಿಂದ ಪಿರಿಯಾಪಟ್ಟಣ ಮಾರ್ಗವಾಗಿ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಅದೇ ಮಾರ್ಗವಾಗಿ ಬರುತ್ತಿದ್ದ ಅಪ್ಪಾಜಿಗೌಡರು ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ರುಕ್ಮಿಣಿ, ಮಗಳು ಆಶಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ತಂದೆ ಅಪ್ಪಾಜಿಗೌಡ ತೀವ್ರವಾಗಿ ಗಾಯಗೊಂಡು ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸುತ್ತಿದ ಮಾರ್ಗಮಧ್ಯ ಮೃತಪಟ್ಟಿದ್ದಾರೆ.
ರಸ್ತೆ ತಡೆ ಪ್ರತಿಭಟನೆ: ಕಿರನಹಳ್ಳಿ ಗೇಟ್ ಬಳಿ ಸಂಭವಿಸಿದ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಸ್ಥರು ರಾಜ್ಯ ಹೆದ್ದಾರಿಗೆ ಆಗಮಿಸಿ ಟೈರ್ ಸುಟ್ಟು ಪ್ರತಿಭಟನೆ ನಡೆಸಿ, ಇದೆ ಸ್ಥಳದಲ್ಲಿ ಅಪಘಾತಗಳು ನಿರಂತರವಾಗಿ ಆಗುತ್ತಿದ್ದು, ರಸ್ತೆಗೆ ಡುಬ್ಬ ನಿರ್ಮಿಸಬೇಕು ಮೃತಪಟ್ಟ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಡಿಸಿ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಪಟ್ಟುಹಿಡಿದು 2 ಗಂಟೆಗೂ ಹೆಚ್ಚುಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement