'ನೌಕರರು ನಿಷ್ಠೆಯಿಂದ ಕೆಲಸ ಮಾಡಬೇಕು'
ಕ.ಪ್ರ.ವಾರ್ತೆ ಸಾಲಿಗ್ರಾಮ್ಣ ಸೆ. 12
ಸರ್ಕಾರಿ ನೌಕರರು ತಮ್ಮ ಕೆಲಸವನ್ನು ನಿಷ್ಠೆಯಿಂದ, ಪ್ರಾಮಾಣಿಕವಾಗಿ ಮಾಡಿದಾಗ ಪ್ರಶಸ್ತಿಗಳು ಅವರತ್ತ ಹುಡುಕಿಕೊಂಡು ಬರುತ್ತವೆಂದು ಕೆ.ಆರ್. ನಗರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎಸ್. ಯದುಗಿರೀಶ್ ಹೇಳಿದರು.
ಸಮೀಪದ ಗಾಯನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸ್ತುತ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿವಮೂರ್ತಿ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಎಲ್ಲಾ ಕ್ಷೇತ್ರಗಳಿಗಿಂತಲೂ ಶಿಕ್ಷಣ ಕ್ಷೇತ್ರವು ಶ್ರೇಷ್ಠವಾಗಿದ್ದು, ಶಿಕ್ಷಕರು ಭವಿಷ್ಯದ ಪ್ರಜೆಗಳನ್ನು ರೂಪಿಸುವ ಮಹತ್ತರ ಜವಾಬ್ದಾರಿ ಹೊಂದಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿ ಶಿಕ್ಷಕರು ತಮ್ಮ ಕೆಲಸ ಮಾಡುವುದರ ಮೂಲಕ ನಾಗರಿಕ ಹಾಗೂ ಸಾಕ್ಷರ ಸಮಾಜವನ್ನು ನಿರ್ಮಿಸಲು ಶ್ರಮಿಸಬೇಕು ಎಂದು ತಿಳಿಸಿದರು.
ಆರ್ಐ ಪ್ರಭಾಕರ್, ಜೆಡಿಎಸ್ ಮುಖಂಡ ಹರ್ಷಕುಮಾರ್ ಗೌಡ, ಎಸ್ಡಿಎಂಸಿ ಅಧ್ಯಕ್ಷ ನಂದೀಶ್, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಪ್ರಸನ್ನ, ಜಿಲ್ಲಾ ಶಿಕ್ಷಕರ ಸಂಘದ ಜಿ.ಟಿ. ಸತೀಶ್, ಎಂ. ನಟೇಶ್, ಮಂಜು, ವಿಠಲ ಇದ್ದರು.