ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಕರೆ
ಕ.ಪ್ರ.ವಾರ್ತೆ ಸಾಲಿಗ್ರಾಮ್ಣ ಸೆ. 13
ವಿದ್ಯಾರ್ಥಿಗಳು ಸ್ವಯಂ ಸಂಶೋಧಕರಾಗಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಕಾರ್ಯಾಕ್ರಮಾಧಿಕಾರಿ ಡಾ.ಎಸ್.ಜಿ. ರಾಮದಾಸರೆಡ್ಡಿ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ನಾಲ್ವಡಿ ಕೃಷ್ಣರಾಜ ಒಡೆಯರ್ ವೇದಿಕೆ ಆಯೋಜಿಸಿದ್ದ ವಿಜಯನಗರ ಸಾಮ್ರಾಜ್ಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರಣ್ಯ ಸಾಮ್ರಾಜ್ಯದ ಉದಯ, ಹಕ್ಕ-ಬುಕ್ಕ ರಾಯರು, ಕೃಷ್ಣದೇವರಾಯ ಮತ್ತು ಅವರ ಶಾಸನಗಳನ್ನು ಕುರಿತು ಉಪನ್ಯಾಸ ನೀಡಿ, ವಿಜಯನಗರದ ಕಲೆ ಮತ್ತು ವಾಸ್ತುಶಿಲ್ಪಗಳನ್ನು ಕುರಿತು ಭಿತ್ತಿ ಚಿತ್ರಗಳ ಪ್ರದರ್ಶನ ಮಾಡುವುದರೊಂದಿಗೆ ಅಂದಿನ ಘಟನಾವಳಿಗಳ ಬಗ್ಗೆ ವಿವರಿಸಿದರು.
ಪ್ರಾಂಶುಪಾಲ ಪ್ರೊ.ಎಸ್.ಜಿ. ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು.