ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸವಲತ್ತು ಅರ್ಹರನ್ನು ತಲುಪಲಿ

Mainashree
Updated On : 14 Sept 2013, 11:03 am

ಕ.ಪ್ರ.ವಾರ್ತೆ  ಪಿರಿಯಾಪಟ್ಟಣ  ಸೆ. 14
ಸರ್ಕಾರದ ವತಿಯಿಂದ ನೀಡಲಾಗುವ ಸವಲತ್ತುಗಳನ್ನು ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ಕೆಲಸ ಮಾಡಬೇಕು ಎಂದು ಶಾಸಕ ಕೆ.ವೆಂಕಟೇಶ್ ಹೇಳಿದರು.
ತಾಲೂಕಿನ ದೊಡ್ಡಕಮರವಳ್ಳಿಯಲ್ಲಿ ಏರ್ಪಡಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿ, ಕಳೆದ ಬಾರಿ ತಾವು ಪ್ರತಿಪಕ್ಷದ ಶಾಸಕರಾಗಿದ್ದರಿಂದ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗಿರಲಿಲ್ಲ. ಪ್ರಸ್ತುತ ನಮ್ಮದೇ ಆದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಆದ್ಯತೆಯ ಮೇರೆಗೆ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಮುತ್ತಿನಮುಳ್ಳಸೋಗೆ ಗ್ರಾಪಂ ಸದಸ್ಯ ಶಿವಕುಮಾರ್ ಮಾತನಾಡಿ, ಅಬಕಾರಿ ಇಲಾಖೆ ಅಧಿಕಾರಿಗಳು ಅನಧಿಕೃತವಾಗಿ ಮದ್ಯ ಮಾರಾಟ ಮಾಡುವವರನ್ನು ತಡೆಗಟ್ಟುತ್ತಿಲ್ಲ. ಅಧಿಕಾರಿಗಳೆ ಪ್ರೋತ್ಸಾಹಿಸುತ್ತಾರೆ ಹಾಗೂ ಭಾಗ್ಯಮ್ಮ ಎಂಬ ಮಹಿಳೆ ಬಹಿರಂಗವಾಗಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಈ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ. ದೂರು ನೀಡಿದ ನಮ್ಮ ಮೇಲೆ ದೌರ್ಜನ್ಯ ಮಾಡುತ್ತಾರೆ ಎಂದು ಆರೋಪಿಸಿದರು. ಈ ಬಗ್ಗೆ ಪ್ರತಿಕ್ರಿಸಿದ ಶಾಸಕ ಕೆ.ವೆಂಕಟೇಶ್, ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರಲ್ಲದೆ ಕಾನೂನಿನ ವ್ಯಾಪ್ತಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ತಹಸೀಲ್ದಾರ್ ಎಂ.ಕೆ.ಸವಿತಾ ಮಾತನಾಡಿ, ಈ ತಿಂಗಳ ಬಿಪಿಎಲ್ ಕಾರ್ಡ್‌ದಾರರಿಗೆ ಯೂನಿಟ್ ಒಂದಕ್ಕೆ 9 ಕೆಜಿ ಅಕ್ಕಿ, 1 ಕೆಜಿ ಗೋಧಿ, 3 ಲೀ ಸೀಮೆಎಣ್ಣೆ ರೀತಿಯಲ್ಲಿ ಬಿಡುಗಡೆಯಾಗಿದ್ದು, ಕಾರ್ಡ್‌ದಾರರು ಪಡೆದುಕೊಳ್ಳುವಂತೆ ತಿಳಿಸಿದರು.
ತಾಲೂಕಿನ ಚಾಮರಾಯನಕೋಟೆಯಿಂದ ಪಕ್ಕದ ಕೊಡಗು ಜಿಲ್ಲೆಯ ಗಡಿಗ್ರಾಮವಾದ ಶಿರಂಗಾಲಕ್ಕೆ ಸಂಪರ್ಕ ಕಲ್ಪಿಸಲು ಕಾವೇರಿ ನದಿಗೆ ಸೇತುವೆ ನಿರ್ಮಿಸಿಕೊಡುವಂತೆ ಹಾಗೂ ಹಾರನಹಳ್ಳಿ ಹೋಬಳಿ ಕೇಂದ್ರವಾಗಿದ್ದರೂ ಮೂಲಭೂತ ಸೌಲಭ್ಯಗಳಿರುವುದುರಿಂದ ಇಲ್ಲಿರುವ ಸರ್ಕಾರದ ನೆಮ್ಮದಿ ಕೇಂದ್ರವನ್ನು ಕಣಗಾಲು ಗ್ರಾಮಕ್ಕೆ ವರ್ಗಾಯಿಸಿಕೊಡುವಂತೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಕಣಗಾಲು ಗ್ರಾಪಂ ವ್ಯಾಪ್ತಿಯ ಕೆ.ಬಸವನಹಳ್ಳಿ, ಮನುಗನಹಳ್ಳಿ, ಕಣಗಾಲು, ಚಾಮರಾಯನಕೋಟೆ, ಹೊನ್ನಾಪುರ, ದೊಡ್ಡಕಮರವಳ್ಳಿ ಗ್ರಾಪಂ ವ್ಯಾಪ್ತಿಯ ಮುತ್ತಿನಮುಳಸೋಗೆ, ಚಿಕ್ಕಕಮರವಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು.
ಜಿಪಂ ಸದಸ್ಯೆ ಕಾವೇರಿ ಶೇಖರ್, ಗ್ರಾಪಂ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ ಜ್ಯೋತಿ, ಉಪ ತಹಸೀಲ್ದಾರ್ ರವಿಶಂಕರ್, ಸರ್ಕಲ್ ಇನ್‌ಸ್ಪೆಕ್ಟರ್ ಪಿ.ವಿ. ವೆಂಕಟೇಶ್, ಬಿಒ ರಾಮಲಿಂಗು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement