ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಗಂಧನಹಳ್ಳಿಯಲ್ಲಿ ಶೀಘ್ರ ಬ್ಯಾಂಕ್: ರಮ್ಯಾ

Mainashree
Updated On : 15 Sept 2013, 11:19 am

ಕ.ಪ್ರ.ವಾರ್ತೆ  ಭೇರ್ಯ  ಸೆ. 15
ಕೆ.ಆರ್. ನಗರ ತಾಲೂಕಿನಲ್ಲಿಯೇ ಅತಿ ಹೆಚ್ಚು ಜನಸಂಖ್ಯೆಯುಳ್ಳ ಗಂಧನಹಳ್ಳಿ ಗ್ರಾಮಕ್ಕೆ ಬ್ಯಾಂಕಿನ ಅವಶ್ಯಕತೆ ಇದ್ದು, ಈ ಸಂಬಂಧ ಕೇಂದ್ರ ಹಣಕಾಸು ಸಚಿವರೊಂದಿಗೆ ಮಾತನಾಡಿ ಶೀಘ್ರವೇ ಬ್ಯಾಂಕ್ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಸಂಸದೆ ರಮ್ಯಾ ಭರವಸೆ ನೀಡಿದರು.
ಅವರು ಕೆ.ಆರ್. ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗಂಧನಹಳ್ಳಿ ಗ್ರಾಮದ ಮುಖಂಡರು ಮತ್ತು ತಾಲೂಕು ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಗಂಧನಹಳ್ಳಿ ಹೇಮಂತ್ ಅವರಿಂದ ಮನವಿ ಸ್ವೀಕರಿಸಿ ಬ್ಯಾಂಕ್ ಸ್ಥಾಪನೆಗೆ ಕ್ರಮ ವಹಿಸುವುದಾಗಿ ತಿಳಿಸಿದರು.
ಜಿಪಂ ಮಾಜಿ ಸದಸ್ಯ ಡಿ.ರವಿಶಂಕರ್, ತಾಲೂಕು ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಗಂಧನಹಳ್ಳಿ ಹೇಮಂತ್, ಕಾರ್ಯದರ್ಶಿ ಕೆಂಪರಾಜು, ಅರುಣ್ಕುಮಾರ್, ಜಿ.ಎಲ್. ಮರೀಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement