ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸಹಕಾರ ಸಂಘಕ್ಕೆ ಜೆಡಿಎಸ್ ಬೆಂಬಲಿಗರ ಆಯ್ಕೆ

Mainashree
Updated On : 16 Sept 2013, 10:34 am

ಹೊಸೂರು: ಕೆ.ಆರ್. ನಗರ ತಾಲೂಕಿನ ಹೊಸೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಹೊಸೂರು ಎಸ್.ಟಿ. ಕೀರ್ತಿ ಮತ್ತು ಉಪಾಧ್ಯಕ್ಷರಾಗಿ ಡಿ.ಆರ್. ರಮೇಶ್ ಅವಿರೋಧವಾಗಿ ಆಯ್ಕೆಯಾದರು.
ಸಂಘದ ಆಡಳಿತ ಕಚೇರಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇವರಿಬ್ಬರನ್ನು ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಹುಣಸೂರಿನ ಸಹಾಯಕ ನಿಬಂಧಕರ ಕಚೇರಿ ನಿರೀಕ್ಷಕ ಎಚ್.ಕೆ. ವೆಂಕಟೇಶ್ ತಿಳಿಸಿದರು.
ಚುನಾವಣಾ ಸಭೆಯಲ್ಲಿ ನಿರ್ದೇಶಕ ಶ್ರೀಧರ, ಎಚ್.ಆರ್. ಮಹೇಶ್, ಜವರಯ್ಯ, ಶ್ರೀನಿವಾಸ್, ಹಳಿಯೂರು ಪ್ರಭಾಕರ, ಸಿ.ಡಿ. ಪ್ರಭಾಕರ, ಕಮಲಮ್ಮ, ಸರಸ್ಪತಿ ಭಾಗವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಣ್ಣ, ಸಹಾಯಕ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
ಜಿಪಂ ಅಧ್ಯಕ್ಷ ಸಿ.ಜೆ. ದ್ವಾರಕೀಶ್, ಮಾಜಿ ಸದಸ್ಯ ಎಚ್.ಎನ್. ವಿಜಯ್, ಹಾಪ್ ಕಾಮ್ಸ್ ಮಾಜಿ ಅಧ್ಯಕ್ಷ  ಸುದರ್ಶನ್, ತಾಪಂ ಮಾಜಿ ಉಪಾಧ್ಯಕ್ಷ ಹಾಡ್ಯ ಮಹದೇವಸ್ವಾಮಿ, ತಾಲೂಕು ಆಶ್ರಯ ಸಮಿತಿ ಮಾಜಿ ಸದಸ್ಯ ಡಿ.ರಮೇಶ್, ಎಚ್.ಎಸ್. ಮಂಜುನಾಥ್, ಕೃಷ್ಣಮೂರ್ತಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement