ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

23 ರಂದು ಜೆಎಸ್‌ಎಸ್‌ನ ಆಸ್ಪತ್ರೆ, ಕಾಲೇಜು ಉದ್ಘಾಟನೆ

Srinivasa Murthy VN
Updated On : 19 Sept 2013, 12:21 pm

ಕ.ಪ್ರ.ವಾರ್ತೆ ಬೆಂಗಳೂರು ಸೆ. 18
ಪ್ರತಿಷ್ಠಿತ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಕಾಲೇಜು ಕಟ್ಟಡವನ್ನು  ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಉದ್ಘಾಟಿಸಲಿದ್ದಾರೆ.
ಸೆ.23ರಂದು ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 1800 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಲೋಕಾರ್ಪಣೆಯಾಗಲಿದೆ. ರಾಜ್ಯಪಾಲ ಹಂಸರಾಜ್ ಭಾರದ್ವಾಜ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಹಾಗೂ ರಾಜ್ಯ ಸಚಿವ ಸಂಪುಟದ ಕೆಲ ಸಚಿವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಜೆಎಸ್‌ಎಸ್ ವೈದ್ಯಕೀಯ ಸೇವೆ ಟ್ರಸ್ಟ್ ಸ್ಥಾಪಿಸಿರುವ ಈ ಆಸ್ಪತ್ರೆಯಲ್ಲಿ ಕಾರ್ಡಿಯಾಲಜಿ, ಗ್ಯಾಸ್ಟ್ರೋ ಎಂಟರಾಲಜಿ, ಯೂರಾಲಜಿ, ಅಂಕಾಲಜಿ, ನ್ಯೂರಾಲಜಿ, ನ್ಯೂರೋಸರ್ಜರಿ, ಪ್ಲಾಸ್ಟಿಕ್ ಸರ್ಜರಿ, ನಿಯೋಂಟಾಲಜಿ, ನೆಫ್ರಾಲಜಿ ಕುರಿತ ನುರಿತ ವೈದ್ಯರು ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸುಮಾರು 300 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಆಸ್ಪತ್ರೆಯಲ್ಲಿ 28 ಶಸ್ತ್ರಚಿಕಿತ್ಸಾ ಘಟಕ ಸ್ಥಾಪಿಸಲಾಗಿದೆ. ಈಗಾಗಲೇ ಆಸ್ಪತ್ರೆಯಲ್ಲಿ 65 ಪ್ರಾಧ್ಯಾಪಕರು, 38 ಸಹ ಪ್ರಾಧ್ಯಾಪಕರು, 48 ಸಹಾಯಕ ಪ್ರಾಧ್ಯಾಪಕರು, 48 ಉಪನ್ಯಾಸಕರು ಹಾಗೂ 1030 ಅರೆ ವೈದ್ಯಕೀಯ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಬಿಮ್ಸ್ ನಿರ್ದೇಶಕ ಸ್ಥಾನಕ್ಕೆ ನೀಡಿದ್ದ ತಡೆಯಾಜ್ಞೆ ತೆರವು
ಮೈಸೂರು: ಬಿ.ಎನ್. ಬಹದ್ಧೂರ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸೈನ್ಸ್‌ನ ನೂತನ ಅಧ್ಯಕ್ಷರ ನೇಮಕಾತಿ ಸಂಬಂಧ ಇದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಈ ಹಿಂದೆ ಬಿಮ್ಸ್‌ನ ಅಧ್ಯಕ್ಷರಾಗಿದ್ದ ಪ್ರೊ.ಬಿ. ಶಿವರಾಜ್ ಅವರು ಮೈಸೂರು ವಿವಿಯ ಅಧಿಕೃತವಲ್ಲದ ಲಾಂಛನ ಬಳಸಿ ವಿದೇಶಿ ಸಂಸ್ಥೆಯೊಡನೆ ಒಪ್ಪಂದ ಮಾಡಿಕೊಂಡಿದ್ದರು. ಈ ಬಗ್ಗೆ ಮೈಸೂರು ವಿವಿ ಸಿಂಡಿಕೇಟ್‌ನಲ್ಲಿ ಚರ್ಚಿಸಿ ಶಿವರಾಜ್ ಅವರನ್ನು ನಿರ್ದೇಶಕ ಸ್ಥಾನದಿಂದ ವಜಾಗೊಳಿಸಿ, ಆ ಸ್ಥಾನಕ್ಕೆ ಆಯಿಷಾ ಷರೀಫ್ ಅವರನ್ನು ನೇಮಿಸಿ ಆದೇಶಿಸಿತ್ತು. ಮೈಸೂರು ವಿವಿ ಈ ಕ್ರಮದ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದ ಶಿವರಾಜ್ ಆಯಿಷಾ ಷರೀಫ್ ನೇಮಕಾತಿಗೆ ತಡೆಯಾಜ್ಞೆ ತಂದಿದ್ದರು. ನಂತರ ಹೈಕೋರ್ಟ್ ಈ ಪ್ರಕರಣ ವಿಚಾರಣೆ ನಡೆಸುವಾಗ ಶಿವರಾಜ್ ತಮ್ಮ ವಾದಕ್ಕೆ ಪೂರಕವಾಗಿ ಸಾಕ್ಷ್ಯಾಧಾರಗಳನ್ನು ಸಾಬೀತುಪಡಿಸುವಲ್ಲಿ ವಿಫಲರಾದರು. ಆದ ಕಾರಣ ಕೋರ್ಟ್ ತಡೆಯಾಜ್ಞೆಯನ್ನು ತೆರವುಗೊಳಿಸಿ ಶಿವರಾಜ್ ಅರ್ಜಿಯನ್ನು ತಿರಸ್ಕರಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement