ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕೆ.ಆರ್. ನಗರದಲ್ಲಿ ಕ್ರೀಡಾಕೂಟ

Srinivasa Murthy VN
Updated On : 19 Sept 2013, 12:22 pm

ಕ.ಪ್ರ.ವಾರ್ತೆ ಕೆ.ಆರ್. ನಗರ ಸೆ. 18
ತಾಲೂಕು ಗ್ರಾಮೀಣ ದಸರಾ ಕ್ರೀಡಾಕೂಟಗಳು ಸೆ.25 ಮತ್ತು 26 ರಂದು ಬಯಲು ರಂಗಮಂದಿರದಲ್ಲಿ ನಡೆಯಲಿವೆ ಎಂದು ತಾಲೂಕು ಗ್ರಾಮೀಣ ದಸರಾ ಸಮಿತಿಯ ಕಾರ್ಯದರ್ಶಿ ಕೆ. ಬಸವರಾಜು ಹೇಳಿದರು.
ಇದಕ್ಕಾಗಿ ಈಗಾಗಲೇ 9 ಉಪ ಸಮಿತಿಗಳನ್ನು ನೇಮಕ ಮಾಡಲಾಗಿದ್ದು, ತಾಲೂಕು ಮಟ್ಟದ ಅಧಿಕಾರಿಗಳಿಗೆ ಸಮಿತಿಗಳ ನಿರ್ವಹಣೆಯ ಜವಾಬ್ದಾರಿ ನೀಡಲಾಗಿದ್ದು, ಈಗಾಗಲೇ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿ ಯಶಸ್ವಿ ಗ್ರಾಮೀಣ ದಸರಾ ಆಚರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ  ತಿಳಿಸಿದರು.
ಸೆ.25ರ ಬೆಳಗ್ಗೆ 9ಕ್ಕೆ ಪುರುಷರಿಗೆ ಗುಂಡು ಎತ್ತುವ ಸ್ಪರ್ಧೆ ಮತ್ತು ಗೊಬ್ಬರದ ಮೂಟೆ ಹೊತ್ತು ಓಡುವ ಸ್ಪರ್ಧೆ ಬಯಲು ರಂಗಮಂದಿರದಲ್ಲಿ ನಡೆಯಲಿದ್ದು, ನಂತರ ಪಟ್ಟಣದ ಹೊರವಲಯದಲ್ಲಿರುವ ಅರ್ಕೇಶ್ವರ ದೇವಾಲಯದ ಬಳಿ ಕೆಸರು ಗದ್ದೆ ಓಟದ ಸ್ಪರ್ಧೆ ನಡೆಯಲಿದೆ ಎಂದು ಹೇಳಿದರು.
ಅಂದು ಬೆಳಗ್ಗೆ 9ಕ್ಕೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಮತ್ತು ನೀರಿನ ಬಿಂದಿಗೆ ಹೊತ್ತು ಓಡುವ ಸ್ಪರ್ಧೆಗಳು ನಡೆಯಲಿದ್ದು, ಸೆ.26ರ ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಮಾಹಿತಿ ನೀಡಿದರು.
ಸೆ.27ರಂದು ಎಲ್ಲಾ ಸರ್ಕಾರಿ ಕಟ್ಟಡಗಳಿಗೆ ದೀಪಾಲಂಕಾರ ಮಾಡಲಾಗುತ್ತದೆ. ಇದರ ಜತೆಗೆ ಸಾರ್ವಜನಿಕರು ಮತ್ತು ವ್ಯಾಪಾರಿಗಳು ತಮ್ಮ ಕಟ್ಟಡಗಳಿಗೆ ದೀಪಾಲಂಕಾರ ಮಾಡಿಕೊಂಡು ತಳಿರು ತೋರಣಗಳಿಂದ ಶೃಂಗರಿಸಿ ಗ್ರಾಮೀಣ ದಸರಾ ಯಶಸ್ವಿಯಾಗಲು ಸಹಕರಿಸಬೇಕೆಂದು ಅವರು ಕೋರಿದರು.  ಸೆ.28ರಂದು ಗ್ರಾಮೀಣ ದಸರಾ ಮೆರವಣಿಗೆ ಕಾರ್ಯಕ್ರಮ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಆರಂಭವಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿ ಬರಲಿದ್ದು, ನಂತರ ಬಯಲು ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು. ಮೊ. 9986448966 ಸಂಪರ್ಕಿಸಬಹುದು. ಉಪ ತಹಸೀಲ್ದಾರ್ ತಿಮ್ಮಯ್ಯ, ಶಂಭುಗೌಡ, ಮಹದೇವ ಇದ್ದರು.

23ಕ್ಕೆ ದಸರಾ ಗ್ರಾಮೀಣ ಕ್ರೀಡಾಕೂಟ
ಪಿರಿಯಾಪಟ್ಟಣ: ಹೆಚ್ಚಿನ ಪ್ರಚಾರ ಮಾಡುವ ಉದ್ದೇಶದಿಂದ ಹಾಗೂ ಗ್ರಾಮೀಣ ಪ್ರದೇಶದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ದಸರಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿ ಎಂಬ ಕಾರಣಕ್ಕೆ ಗ್ರಾಮೀಣ ದಸರಾ ಕ್ರೀಡಾಕೂಟವನ್ನು ಸೆ.23ಕ್ಕೆ ಮುಂದೂಡಲಾಗಿದೆ ಎಂದು ತಹಸೀಲ್ದಾರ್ ಎಂ.ಕೆ. ಸವಿತಾ ಹೇಳಿದ್ದಾರೆ. ಸೆ.23ರ ಬೆಳಗ್ಗೆ 9ಕ್ಕೆ ಗೋಣಿಕೊಪ್ಪ ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕ್ರೀಡಾಕೂಟವನ್ನು ಏರ್ಪಡಿಸಿದ್ದು, ಪುರುಷ ಹಾಗೂ ಮಹಿಳೆಯರಿಗೆ 40 ವರ್ಷದ ಮೇಲ್ಪಟ್ಟು ಹಾಗೂ 40 ವರ್ಷದ ಒಳಗಿನವರ ಎರಡು ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. ಆಸಕ್ತಿಯುಳ್ಳವರು ಅಂದು ಬೆಳಗ್ಗೆ ಕ್ರೀಡಾಂಗಣದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಲು ಸಹಾಯಕ ಕೃಷಿ ನಿದೇಶಕರ ಕಚೇರಿಯಲ್ಲಿ ಸಂಪರ್ಕಿಸಬಹುದು.
ಪುರುಷರ ವಿಭಾಗ ಸ್ಪರ್ಧೆಗಳು- ಕೆಸರು ಗದ್ದೆ ಓಟ, ಗುಂಡು ಎತ್ತುವುದು, ಗೊಬ್ಬರದ ಮೂಟೆ ಹೊತ್ತು ಓಡುವುದು, ಮೂರು ಕಾಲಿನ ಓಟದ ಸ್ಪರ್ಧೆ. ಮಹಿಳೆಯರ ವಿಭಾಗ- ರಂಗೋಲಿ ಬಿಡಿಸುವ ಸ್ಪರ್ಧೆ, ನೀರಿನ ಬಿಂದಿನ ಹೊತ್ತು ಓಡುವ ಸ್ಪರ್ಧೆ, ಹಗ್ಗ ಜಗ್ಗಾಟ ಸ್ಪರ್ಧೆ, ಕೆಸರು ಗದ್ದೆ ಓಟದ ಸ್ಪರ್ಧೆಗಳಿರುತ್ತವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement